Isaiah 26:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ದೇವರೇ, ನೀನು ಅವರನ್ನು ಶಿಕ್ಷಿಸಿದರೆ ಅವರು ಅದನ್ನು ನೋಡುವರು. ನಿನ್ನ ಜನರ ಮೇಲೆ ನಿನಗಿರುವ ಗಾಢಪ್ರೀತಿಯನ್ನು ಆ ದುಷ್ಟಜನರು ನೋಡಲಿ. ಆಗ ಅವರು ಅವಮಾನ ಹೊಂದುವರು. ನಿನ್ನ ಶತ್ರುಗಳು ತಮ್ಮ ದುಷ್ಟತನದ ಬೆಂಕಿಯಲ್ಲಿಯೇ ಸುಟ್ಟುಹೋಗುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ನೀನು ಕೈಯೆತ್ತಿದ್ದರೂ ಅವರು ಲಕ್ಷಿಸರು. ಆದರೆ ನಿನ್ನ ಸ್ವಜನರ ಅಭಿಮಾನವನ್ನು ನೋಡಿ ನಾಚಿಕೆಪಡಲಿ; ಹೌದು, ಆ ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವುದು.
Kannada BSI Bible 2016
ಕರ್ತನೇ, ನಿನ್ನ ಕೈ ಎತ್ತಿರಲು ಅವರು ನೋಡುವದಿಲ್ಲ, ಆದರೆ ಅವರು ನೋಡಿ ನಿನ್ನ ಜನರಿಗೋಸ್ಕರ ಹೊಟ್ಟೆಕಿಚ್ಚು ಪಟ್ಟದ್ದಕ್ಕೆ ನಾಚಿಕೆ ಪಡುವರು. ಹೌದು, ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ನೀನು ಕೈಯೆತ್ತಿದ್ದರೂ ಅವರು ಲಕ್ಷಿಸರು. ಆದರೆ ನಿನ್ನ ಸ್ವಜನಾಭಿಮಾನವನ್ನು ನೋಡಿ ನಾಚಿಕೆಪಡುವರು; ಹೌದು, ಆ ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.
Kannada Bible (KNCL) BSI 2016
ಅವರ ಮೇಲೆ ನೀ ಕೈಯೆತ್ತಿದರೂ, ಸರ್ವೇಶ್ವರಾ, ಲಕ್ಷಿಸರವರು ನಿನ್ನನ್ನು. ನಾಚಲಿ ಅವರು ನೋಡಿ ನಿನ್ನ ಸ್ವಜನಾಭಿಮಾನವನು ದಹಿಸಿಬಿಡಲಿ ಅಗ್ನಿಜ್ವಾಲೆಯು ಆ ನಿನ್ನ ವಿರೋಧಿಗಳನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರೇ, ನಿಮ್ಮ ಕೈ ಮೇಲಕ್ಕೆ ಎತ್ತಲಾಗಿದೆ. ಆದರೆ ಅವರು ಅದನ್ನು ಕಾಣುವುದಿಲ್ಲ. ನಿಮ್ಮ ಜನರಿಗಾಗಿ ನಿಮ್ಮ ಉತ್ಸಾಹವನ್ನು ಅವರು ನೋಡಲಿ ಮತ್ತು ನಾಚಿಕೆಪಡಲಿ; ನಿನ್ನ ವಿರೋಧಿಗಳಿಗಾಗಿದ್ದ ಅಗ್ನಿಯು ಅದನ್ನು ದಹಿಸಿಬಿಡಲಿ.