Isaiah 26:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನೇ, ನೀನೇ ನಮ್ಮ ದೇವರು. ಆದರೆ ಹಿಂದಿನ ಕಾಲದಲ್ಲಿ ನಾವು ಇತರ ಪ್ರಭುಗಳನ್ನು ಅನುಸರಿಸಿದೆವು. ನಾವು ನಮ್ಮ ಒಡೆಯರುಗಳಿಗೆ ಸೇರಿದ್ದೆವು. ಆದರೆ ಈಗ ಜನರು ಒಂದೇ ಹೆಸರನ್ನು, ಅಂದರೆ ನಿನ್ನ ಹೆಸರನ್ನೇ ನೆನಪುಮಾಡಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮ ದೇವರಾದ ಯೆಹೋವನೇ, ನಿನ್ನ ಸ್ಥಾನದಲ್ಲಿ ಬೇರೆ ಒಡೆಯರು ನಮ್ಮ ಮೇಲೆ ದೊರೆತನ ಮಾಡುತ್ತಿದ್ದರು; ಆದರೆ ನಾವು ನಿನ್ನ ನಾಮವನ್ನೇ ಹೊಗಳುವೆವು, ಸ್ತುತಿಸುವೆವು.
Kannada BSI Bible 2016
ಓ ಕರ್ತನೇ, ನಮ್ಮ ದೇವರೇ, ನಿನ್ನ ಬದಲು ಬೇರೆ ಒಡೆಯರು ನಮ್ಮ ಮೇಲೆ ದೊರೆತನ ಮಾಡುತ್ತಿದ್ದರು. ಆದರೆ ನಿನ್ನಿಂದ ಮಾತ್ರವೇ ನಿನ್ನ ನಾಮವನ್ನು ನಾವು ಜ್ಞಾಪಿಸಿ ಕೊಳ್ಳುವಂತಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮ ದೇವರಾದ ಯೆಹೋವನೇ, ನಿನ್ನ ಸ್ಥಾನದಲ್ಲಿ ಬೇರೆ ಒಡೆಯರು ನಮ್ಮ ಮೇಲೆ ದೊರೆತನಮಾಡುತ್ತಿದ್ದರು; ಈಗ ನಿನ್ನ ನಾಮವನ್ನು ಹೊಗಳುವದಕ್ಕೆ ನಿನ್ನಿಂದಲೇ ನಮಗೆ ಅವಕಾಶವಾಯಿತು.
Kannada Bible (KNCL) BSI 2016
ನಮ್ಮ ದೇವರಾದ ಸರ್ವೇಶ್ವರಾ, ಇಗೋ, ನೋಡು ನಮ್ಮನಾಳಿಹರು ಭೂರಾಜರು ನಿನ್ನ ಬಿಟ್ಟು, ಆದರೇನು, ಹೊಗಳುವೆವು ನಿನ್ನ ನಾಮವನೆ ಮುನ್ನಿಟ್ಟು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರೇ, ನಮ್ಮ ದೇವರೇ, ನಿಮ್ಮ ಬದಲು ಬೇರೆ ಒಡೆಯರು ನಮ್ಮ ಮೇಲೆ ದೊರೆತನ ಮಾಡುತ್ತಿದ್ದರು. ಆದರೆ ನಿಮ್ಮ ನಾಮವನ್ನು ಮಾತ್ರವೇ ನಾವು ಗೌರವಿಸುವೆವು.