Isaiah 26:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ಪ್ರೀತಿಸುವ ಜನಾಂಗಕ್ಕೆ ನೀನು ಸಹಾಯ ಮಾಡಿದೆ. ಬೇರೆ ಜನಾಂಗದವರು ಅವರನ್ನು ಸೋಲಿಸದಂತೆ ಮಾಡಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ನೀನು ಜನಾಂಗವನ್ನು ಹೆಚ್ಚಿಸಿದ್ದೀ, ಹೌದು, ನಿನ್ನ ಜನಾಂಗವನ್ನು ವೃದ್ಧಿಗೊಳಿಸಿದ್ದೀ; ನೀನು ದೇಶದ ಮೇರೆಗಳನ್ನೆಲ್ಲಾ ವಿಸ್ತರಿಸಿ ಮಹಿಮೆಗೊಂಡಿದ್ದೀ.
Kannada BSI Bible 2016
ಜನಾಂಗವನ್ನು ಹೆಚ್ಚಿಸಿದ್ದೀ, ಓ ಕರ್ತನೇ, ಜನಾಂಗ ವನ್ನು ಹೆಚ್ಚಿಸಿದ್ದೀ, ನೀನು ಮಹಿಮೆ ಹೊಂದಿದ್ದೀ; ನೀನು ದೇಶದ ಮೇರೆಗಳನ್ನೆಲ್ಲಾ ಭೂಮಿಯ ಕಟ್ಟಕಡೆ ಯ ವರೆಗೂ ವಿಸ್ತರಿಸಿದ್ದೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ನಿನ್ನ ಜನವನ್ನು ಹೆಚ್ಚಿಸಿದ್ದಿ, ಹೌದು ನಿನ್ನ ಪ್ರಜೆಯನ್ನು ವೃದ್ಧಿಗೊಳಿಸಿದ್ದಿ; ನೀನು ದೇಶದ ಮೇರೆಗಳನ್ನೆಲ್ಲಾ ವಿಸ್ತರಿಸಿ ಮಹಿಮೆಗೊಂಡಿದ್ದಿ.
Kannada Bible (KNCL) BSI 2016
ಹೆಚ್ಚಿಸಿರುವೆ ಸರ್ವೇಶ್ವರಾ, ನಿನ್ನ ಜನರನು ಹೌದು, ವೃದ್ಧಿಗೊಳಿಸಿರುವೆ ನಿನ್ನ ಪ್ರಜೆಯನು. ವಿಸ್ತರಿಸಿರುವೆ ನಾಡಿನ ಮೇರೆಗಳನು ಈಪರಿ ಪಡೆದಿರುವೆ ಮಹಿಮೆಯನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನಾಂಗವನ್ನು ಹೆಚ್ಚಿಸಿದ್ದೀರಿ. ಯೆಹೋವ ದೇವರೇ, ಜನಾಂಗವನ್ನು ಹೆಚ್ಚಿಸಿದ್ದೀರಿ. ನೀವು ಮಹಿಮೆ ಹೊಂದಿದ್ದೀರಿ. ನೀವು ದೇಶದ ಮೇರೆಗಳನ್ನೆಲ್ಲಾ ಭೂಮಿಯ ಕಟ್ಟಕಡೆಯವರೆಗೂ ವಿಸ್ತರಿಸಿದ್ದೀರಿ.