Isaiah 26:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಯೆಹೋವನು ಹೇಳುವುದೇನೆಂದರೆ, “ನಿನ್ನ ಜನರು ಸತ್ತಿದ್ದಾರೆ. ಆದರೆ ಅವರು ಮತ್ತೆ ಬದುಕುವರು. ನನ್ನ ಜನರ ದೇಹಗಳು ಸತ್ತವರೊಳಗಿಂದ ಏಳುವವು. ಭೂಮಿಯ ಮೇಲೆ ಸತ್ತಿರುವ ಜನರೇ, ಎದ್ದುನಿಂತು ಸಂತೋಷಿಸಿರಿ. ನಿಮ್ಮನ್ನು ಆವರಿಸಿದ ಮಂಜು ಮುಂಜಾನೆಯ ಬೆಳಕಿನಂತೆ ಪ್ರಕಾಶಿಸುತ್ತದೆ. ಭೂಮಿಯು ತನ್ನಲ್ಲಿರುವ ಸತ್ತವರನ್ನು ಒಪ್ಪಿಸಿಕೊಡುವಾಗ ಪ್ರಾರಂಭವಾಗುವ ಹೊಸ ದಿನವನ್ನು ಅದು ಸೂಚಿಸುವದು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೃತರಾದ ನಿನ್ನ ಜನರು ಬದುಕುವರು, ನಮ್ಮ ಹೆಣಗಳು ಜೀವದಿಂದ ಏಳುವವು, ಧೂಳಿನ ನಿವಾಸಿಗಳೇ, ಎಚ್ಚರಗೊಂಡು ಹರ್ಷಧ್ವನಿಗೈಯಿರಿ! ಯೆಹೋವನೇ, ನೀನು ಸುರಿಸುವ ಇಬ್ಬನಿಯು ಮುಂಜಾನೆಯ ಇಬ್ಬನಿಯಂತಿರುವುದು. ಭೂಮಿಯು ಸತ್ತವರನ್ನು ಹೊರಗೆ ಹಾಕುವುದು.
Kannada BSI Bible 2016
ಮೃತರಾದ ನಿನ್ನ ಜನರು ಬದುಕುವರು, ನನ್ನವರ ಹೆಣಗಳು ಏಳುವವು; ದೂಳಿನ ನಿವಾಸಿಗಳೇ; ಎಚ್ಚತ್ತು ಹರ್ಷ ಸ್ವರಗೈಯಿರಿ! ನೀನು ಸುರಿಯುವ ಇಬ್ಬನಿಯು ಇಬ್ಬನಿಯ ಸಸ್ಯಗಳಂತಿವೆ. ಭೂಮಿಯು ಸತ್ತವರನ್ನು ಹೊರಪಡಿಸುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೃತರಾದ ನಿನ್ನ ಜನರು ಬದುಕುವರು, ನನ್ನವರ ಹೆಣಗಳು ಜೀವದಿಂದೇಳುವವು, ಮಣ್ಣಿನಲ್ಲಿ ಪವಳಿಸಿರುವವರೇ, ಎಚ್ಚತ್ತು ಹರ್ಷಧ್ವನಿಗೈಯಿರಿ! [ಯೆಹೋವನೇ,] ನೀನು ಸುರಿಯುವ ಇಬ್ಬನಿಯು ಜ್ಯೋತಿರ್ಮಯವಾದದ್ದು, ಭೂವಿುಯು ಸತ್ತವರನ್ನು ಹೊರಪಡಿಸುವದು.
Kannada Bible (KNCL) BSI 2016
ಬದುಕುವರು ನಿಧನರಾದ ನಮ್ಮ ಜನರು ಜೀವದಿಂದೇಳುವುವು ನಮ್ಮವರ ಶವಗಳು. ಎದ್ದು ಹರ್ಷಧ್ವನಿಗೈಯಲಿ ನೆಲದಲಿ ಬಿದ್ದಿರುವವರು. ನೀ ಸುರಿಸುವ ಇಬ್ಬನಿ ಜ್ಯೋತಿರ್ಮಯ, ಆದುದರಿಂದ ಸತ್ತವರು ಪುನರುತ್ಥಾನಹೊಂದುವರು ನೆಲದಿಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಮೃತರಾದ ನಿನ್ನ ಜನರು ಬದುಕುವರು. ಅವರ ದೇಹಗಳು ಏಳುವುವು. ಧೂಳಿನ ನಿವಾಸಿಗಳೇ, ಎಚ್ಚೆತ್ತು ಹರ್ಷಧ್ವನಿಗೈಯಿರಿ! ಯೆಹೋವ ದೇವರೇ, ನಿಮ್ಮ ಇಬ್ಬನಿ ಮುಂಜಾನೆಯ ಇಬ್ಬನಿಯಂತಿರುವುದು. ಭೂಮಿಯು ಸತ್ತವರನ್ನು ಹೊರಪಡಿಸುವುದು.