Isaiah 26:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಜನರೇ, ನಿಮ್ಮ ನಿಮ್ಮ ಕೋಣೆಯೊಳಗೆ ಹೋಗಿ ಕದಮುಚ್ಚಿರಿ. ಸ್ವಲ್ಪಕಾಲ ನೀವು ಅಲ್ಲಿಯೇ ಅಡಗಿಕೊಳ್ಳಿರಿ. ದೇವರ ಕೋಪ ತೀರುವ ತನಕ ಅಲ್ಲಿಯೇ ಅವಿತುಕೊಳ್ಳಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಜನರೇ, ಬನ್ನಿರಿ, ನಿಮ್ಮ ನಿಮ್ಮ ಕೋಣೆಗಳಲ್ಲಿ ಸೇರಿಕೊಂಡು ಬಾಗಿಲುಗಳನ್ನು ಮುಚ್ಚಿಕೊಳ್ಳಿರಿ; ದೈವರೋಷವು ತೀರುವ ತನಕ ಒಂದು ಕ್ಷಣ ಅವಿತುಕೊಳ್ಳಿರಿ.
Kannada BSI Bible 2016
ನನ್ನ ಜನರೇ, ಬನ್ನಿರಿ, ನಿಮ್ಮ ಕೋಣೆಗಳಲ್ಲಿ ಸೇರಿ ಬಾಗಲನ್ನು ಮುಚ್ಚಿಕೊಳ್ಳಿರಿ; ಸ್ವಲ್ಪ ಹೊತ್ತು ಅಡಗಿಕೊಂಡು ರೋಷವು ಹಾದುಹೋಗುವ ತನಕ ಇರ್ರಿ.ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಜನರೇ, ಬನ್ನಿರಿ, ನಿಮ್ಮ ನಿಮ್ಮ ಕೋಣೆಗಳಲ್ಲಿ ಸೇರಿ ಬಾಗಿಲು ಮುಚ್ಚಿಕೊಳ್ಳಿರಿ; ದೈವರೋಷವು ತೀರುವ ತನಕ ಒಂದು ಕ್ಷಣ ಅವಿತುಕೊಳ್ಳಿರಿ.
Kannada Bible (KNCL) BSI 2016
ನನ್ನ ಜನರೇ, ಹೋಗಿ; ನಿಮ್ಮ ನಿಮ್ಮ ಮನೆಗಳನ್ನು ಸೇರಿ ಬಾಗಿಲು ಮುಚ್ಚಿಕೊಳ್ಳಿ. ದೇವರ ಕೋಪ ತೀರುವತನಕ ಕೊಂಚಕಾಲ ಅವಿತುಕೊಳ್ಳಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಜನರೇ, ಹೋಗಿರಿ. ನಿಮ್ಮ ಕೋಣೆಗಳಲ್ಲಿ ಸೇರಿ, ಬಾಗಿಲನ್ನು ಮುಚ್ಚಿಕೊಳ್ಳಿರಿ. ಸ್ವಲ್ಪ ಹೊತ್ತು ರೋಷವು ಹಾದುಹೋಗುವ ತನಕ ಅಡಗಿಕೊಂಡಿರಿ.