Isaiah 26:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಗೋ, ಈ ಲೋಕದ ಜನರು ಮಾಡಿದ ಪಾಪಕೃತ್ಯಗಳಿಗೆ ನ್ಯಾಯತೀರಿಸಲು ಯೆಹೋವನು ತನ್ನ ಸ್ಥಳದಿಂದ ಎದ್ದಿದ್ದಾನೆ. ಭೂಮಿಯು ತನ್ನಲ್ಲಿರುವ ರಕ್ತವನ್ನು ತೋರಿಸುವದು. ಭೂಮಿಯು ಇನ್ನುಮುಂದೆ ಸತ್ತವರನ್ನು ಮರೆಮಾಡುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ಯೆಹೋವನು ಭೂನಿವಾಸಿಗಳಿಗೆ ಅವರ ಪಾಪ ಫಲವನ್ನು ತಿನ್ನಿಸಬೇಕೆಂದು ತನ್ನ ಸ್ಥಳದಿಂದ ಹೊರಡುತ್ತಾನೆ; ಭೂಮಿಯು ತನ್ನಲ್ಲಿ ಇಂಗಿದ್ದ ರಕ್ತವನ್ನು ಪ್ರಕಟಮಾಡುವುದು, ತನ್ನ ನಿವಾಸಿಗಳಲ್ಲಿ ಹತರಾದವರನ್ನು ಇನ್ನು ಮರೆಮಾಡುವುದಿಲ್ಲ.”
Kannada BSI Bible 2016
ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ಯೆಹೋವನು ಭೂನಿವಾಸಿಗಳಿಗೆ ಅವರ ಪಾಪಫಲವನ್ನು ತಿನ್ನಿಸಬೇಕೆಂದು ತನ್ನ ಸ್ಥಳದಿಂದ ಹೊರಡುತ್ತಾನೆ; ಭೂವಿುಯು ತನ್ನಲ್ಲಿ ಇಂಗಿದ್ದ ರಕ್ತವನ್ನು ವ್ಯಕ್ತಗೊಳಿಸುವದು, ತನ್ನ ನಿವಾಸಿಗಳಲ್ಲಿ ಹತರಾಗಿದ್ದವರನ್ನು ಇನ್ನು ಮರೆಮಾಜದು.
Kannada Bible (KNCL) BSI 2016
ಇಗೋ, ಸರ್ವೇಶ್ವರ ಜಗದ ಜನಕ್ಕೆ ಅವರವರ ಪಾಪದ ಫಲವನ್ನು ಉಣಿಸಲು ತಮ್ಮ ನಿವಾಸದಿಂದ ಹೊರಟಿರುವರು. ಭೂಮಿ ತನ್ನಲ್ಲಿ ಇಂಗಿದ ರಕ್ತವನ್ನು ಬೆಳಕಿಗೆ ತರುವುದು; ಭೂನಿವಾಸಿಗಳಲ್ಲಿ ಹತರಾದವರನ್ನು ಇನ್ನು ಮರೆಮಾಚದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಭೂನಿವಾಸಿಗಳ ದುಷ್ಕೃತ್ಯಕ್ಕೆ ಶಿಕ್ಷಿಸುವುದಕ್ಕೆ ಯೆಹೋವ ದೇವರು ತಮ್ಮ ಸ್ಥಳದಿಂದ ಹೊರಟಿದ್ದಾರೆ. ಭೂಮಿಯು ಸಹ ತನ್ನಲ್ಲಿ ಕೊಂದುಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ, ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟ ಮಾಡುವುದು.