Isaiah 26:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಯೆಹೋವನು ಗರ್ವದ ನಗರವನ್ನು ನಾಶಮಾಡುವನು. ಅಲ್ಲಿ ವಾಸಿಸುವವರನ್ನು ಆತನು ಶಿಕ್ಷಿಸುತ್ತಾನೆ. ಯೆಹೋವನು ಆ ಉನ್ನತವಾದ ನಗರವನ್ನು ಧೂಳಿಗೆ ಹಾಕಿಬಿಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಹೆಮ್ಮೆಯಿಂದ ವಾಸಿಸುವವರನ್ನು ಇಳಿಸಿದ್ದಾನೆ. ಅವರ ಉನ್ನತ ಪಟ್ಟಣವನ್ನು ತಗ್ಗಿಸಿದ್ದಾನೆ. ಅದನ್ನು ಕೆಡವಿ, ನೆಲಸಮಮಾಡಿ ಧೂಳಿಗೆ ತಂದಿದ್ದಾನೆ.
Kannada BSI Bible 2016
ಆತನು ಎತ್ತರದಲ್ಲಿ ವಾಸಿಸುವವರನ್ನು ಇಳಿಸಿದ್ದಾ. ಉನ್ನತ ದಲ್ಲಿರುವ ಪಟ್ಟಣವನ್ನು ತಗ್ಗಿಸಿದ್ದಾನೆ. ಅದನ್ನು ಕೆಡವಿ ನೆಲಸಮಮಾಡಿ ದೂಳಿಗೆ ತಂದಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಎತ್ತರದಲ್ಲಿ ವಾಸಿಸುವವರನ್ನೂ [ಅವರ] ಉನ್ನತಪಟ್ಟಣವನ್ನೂ ತಗ್ಗಿಸಿದ್ದಾನೆ. ಅದನ್ನು ಕೆಡವಿ ನೆಲಸಮಮಾಡಿ ದೂಳಿಗೆ ತಂದಿದ್ದಾನೆ.
Kannada Bible (KNCL) BSI 2016
ತಗ್ಗಿಸುವನಾತ ಎತ್ತರದಲಿ ವಾಸಿಸುವವರನು, ಕೆಡವಿ, ನೆಲಸಮಮಾಡಿ, ಧೂಳಾಗಿಸುವನು ಅವರು ವಾಸಮಾಡುವಾ ಉನ್ನತ ನಗರವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಎತ್ತರದಲ್ಲಿ ವಾಸಿಸುವವರನ್ನು ಇಳಿಸಿದ್ದಾರೆ. ಉನ್ನತದಲ್ಲಿರುವ ಪಟ್ಟಣವನ್ನು ತಗ್ಗಿಸಿದ್ದಾರೆ. ಅದನ್ನು ಕೆಡವಿ ನೆಲಸಮಮಾಡಿ ಧೂಳಿಗೆ ತಂದಿದ್ದಾರೆ.