Isaiah 26:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಯೆಹೋವನೇ, ನಾವು ನಿನ್ನ ನ್ಯಾಯವಿಚಾರಣೆಯ ರೀತಿಗಾಗಿ ಕಾಯುತ್ತಿದ್ದೇವೆ. ನಮ್ಮ ಆತ್ಮಗಳು ನಿನ್ನನ್ನೂ ನಿನ್ನ ನಾಮವನ್ನೂ ನೆನಪು ಮಾಡುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೌದು, ಯೆಹೋವನೇ, ನಿನ್ನ ನ್ಯಾಯತೀರ್ಪಿನ ಮಾರ್ಗದಲ್ಲಿ ನಡೆಯುತ್ತಾ ನಿನಗಾಗಿ ಕಾದುಕೊಂಡಿದ್ದೇವೆ; ನಿನ್ನ ನಾಮಸ್ಮರಣೆಯು ನಮ್ಮ ಆತ್ಮಕ್ಕೆ ಇಷ್ಟವಾಗಿದೆ, ಹಿತವಾಗಿದೆ.
Kannada BSI Bible 2016
ಹೌದು, ಓ ಕರ್ತನೇ, ನಿನ್ನ ನ್ಯಾಯತೀರ್ಪಿನ ಮಾರ್ಗದಲ್ಲಿ ನಾವು ನಿನಗೋಸ್ಕರ ಕಾದುಕೊಂಡಿದ್ದೇವೆ; ನಿನ್ನ ಹೆಸರಿನ ನೆನಪಿನ ಕಡೆಗೆ ನಮ್ಮ ಆತ್ಮದ ಇಷ್ಟವಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೌದು, ಯೆಹೋವನೇ, ನಿನ್ನ ನ್ಯಾಯಕಾರ್ಯಗಳು ತೋರತಕ್ಕ ಮಾರ್ಗದಲ್ಲಿ ನಿನ್ನನ್ನು ಕಾದುಕೊಂಡಿದ್ದೇವೆ; ನಿನ್ನ ನಾಮಸ್ಮರಣೆಯು ನಮ್ಮ ಆತ್ಮಕ್ಕೆ ಕೇವಲ ಇಷ್ಟವಾಗಿದೆ.
Kannada Bible (KNCL) BSI 2016
ನಡೆವೆವು ನಾವು, ಸರ್ವೇಶ್ವರಾ, ನಿನ್ನ ನೀತಿಮಾರ್ಗದೊಳು ಕಾದಿರುವೆವು ನಿನಗಾಗಿ ಭರವಸೆಯಿಟ್ಟು ನಿನ್ನೊಳು ನಿನ್ನ ನಾಮಸ್ಮರಣೆಯ ಬಯಕೆ ನಮ್ಮ ಅಂತರಾತ್ಮದೊಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೌದು, ಯೆಹೋವ ದೇವರೇ, ನಿಮ್ಮ ನ್ಯಾಯತೀರ್ಪಿನ ಮಾರ್ಗದಲ್ಲಿ ನಡೆಯುತ್ತಾ ನಾವು ನಿಮಗೋಸ್ಕರ ಕಾದುಕೊಂಡಿದ್ದೇವೆ, ನಿಮ್ಮ ನಾಮಸ್ಮರಣೆಯೇ ನಮ್ಮ ಹೃದಯದ ಬಯಕೆ.