Isaiah 26:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಮ್ಮ ಆತ್ಮವು ನಿನ್ನೊಂದಿಗೆ ರಾತ್ರಿಯಲ್ಲಿರಲು ಆಶಿಸುತ್ತದೆ. ನಮ್ಮೊಳಗಿರುವ ಆತ್ಮವು ನಿನ್ನ ಸಹವಾಸವನ್ನು ಬಯಸುತ್ತದೆ. ಹೊಸ ದಿವಸಗಳ ಮುಂಜಾನೆಯಲ್ಲಿ ನಿನ್ನೊಂದಿಗಿರಲು ಆಶಿಸುತ್ತದೆ. ನಿನ್ನ ನ್ಯಾಯವು ಈ ಭೂಮಿಗೆ ಬಂದಾಗ ಜನರು ಜೀವನದ ಸತ್ಯಮಾರ್ಗವನ್ನು ಅರಿಯುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರಾತ್ರಿಯಲ್ಲಿ ನಿನ್ನನ್ನು ಮನಃಪೂರ್ವಕವಾಗಿ ಹಾರೈಸಿದ್ದೇವೆ, ಹೌದು, ನಮ್ಮ ಆತ್ಮದಲ್ಲಿ ನಿನ್ನನ್ನು ತವಕದಿಂದ ಹುಡುಕಿದ್ದೇವೆ. ನೀನು ಲೋಕದಲ್ಲಿ ನ್ಯಾಯಕಾರ್ಯಗಳನ್ನು ನಡೆಸುವಾಗ ಭೂನಿವಾಸಿಗಳು ಧರ್ಮಜ್ಞಾನವನ್ನು ಪಡೆದುಕೊಳ್ಳುವರು.
Kannada BSI Bible 2016
ರಾತ್ರಿಯಲ್ಲಿ ನಿನ್ನನ್ನು ಮನಃಪೂರ್ವಕವಾಗಿ ಬಯಸಿದ್ದೇನೆ, ಹೌದು, ನನ್ನಲ್ಲಿ ರುವ ನನ್ನ ಆತ್ಮದೊಂದಿಗೆ ನಿನ್ನನ್ನು ಮುಂಜಾನೆಯಲ್ಲಿ ಹುಡುಕುತ್ತಿದ್ದೇನೆ; ಭೂಮಿಗೆ ನಿನ್ನ ನ್ಯಾಯತೀರ್ವಿಕೆ ಗಳು ನಡೆಯುವಾಗಲೇ ಭೂಲೋಕದ ನಿವಾಸಿಗಳು ನೀತಿಯನ್ನು ಕಲಿಯುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ರಾತ್ರಿಯಲ್ಲಿ ನಿನ್ನನ್ನು ಮನಃಪೂರ್ವಕವಾಗಿ ಹಾರೈಸಿದ್ದೇವೆ, ಹೌದು, ನಮ್ಮ ಆತ್ಮದಲ್ಲಿ ನಿನ್ನನ್ನು ತವಕದಿಂದ ಹುಡುಕಿದ್ದೇವೆ. ನೀನು ಲೋಕದಲ್ಲಿ ನ್ಯಾಯಕಾರ್ಯಗಳನ್ನು ನಡಿಸುವಾಗ ಭೂನಿವಾಸಿಗಳು ಧರ್ಮಜ್ಞಾನವನ್ನು ಪಡೆದುಕೊಳ್ಳುವರು.
Kannada Bible (KNCL) BSI 2016
ಹಾರೈಸಿದೆ ಎನ್ನಾತ್ಮ ನಿನ್ನನು ಇರುಳೊಳು ಅರಸಿತೆನ್ನ ಮನ ನಿನ್ನನು ಮುಂಜಾನೆಯೊಳು. ನೀನೀಯುವಾಗ ಜಗಕೆ ನ್ಯಾಯತೀರ್ಪನು ಕಲಿತುಕೊಳ್ಳುವರು ಭೂನಿವಾಸಿಗಳು ನ್ಯಾಯನೀತಿಯನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರಾತ್ರಿಯಲ್ಲಿ ನಿಮ್ಮನ್ನು ಮನಃಪೂರ್ವಕವಾಗಿ ಬಯಸಿದ್ದೇನೆ. ನನ್ನಲ್ಲಿರುವ ನನ್ನ ಆತ್ಮದೊಂದಿಗೆ ನಿಮ್ಮನ್ನು ಮುಂಜಾನೆಯಲ್ಲಿ ಹುಡುಕುತ್ತಿದ್ದೇನೆ. ಏಕೆಂದರೆ ಭೂಮಿಗೆ ನಿಮ್ಮ ನ್ಯಾಯತೀರ್ಪುಗಳು ನಡೆಯುವಾಗಲೇ ಭೂಲೋಕದ ನಿವಾಸಿಗಳು ನೀತಿಯನ್ನು ಕಲಿಯುತ್ತಾರೆ.