Isaiah 27:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದ್ರಾಕ್ಷಿಬಳ್ಳಿ ಒಣಗಿಹೋಗುವದು. ಅದರ ಕೊಂಬೆಗಳು ಮುರಿದುಬೀಳುವವು. ಹೆಂಗಸರು ಆ ಕೊಂಬೆಗಳನ್ನು ಸೌದೆಯಾಗಿ ಉಪಯೋಗಿಸುವರು. ಜನರು ತಿಳಿದುಕೊಳ್ಳುವದಕ್ಕೆ ಮನಸ್ಸು ಕೊಡುವದಿಲ್ಲ. ಆದ್ದರಿಂದ ಅವರ ನಿರ್ಮಾಣಿಕನಾದ ದೇವರು ಅವರನ್ನು ಸಂತೈಸುವದಿಲ್ಲ. ಅವರ ನಿರ್ಮಾಣಿಕನು ಅವರಿಗೆ ದಯೆ ತೋರುವದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿದುಹೋಗುವವು, ಹೆಂಗಸರು ಬಂದು ಅವುಗಳಿಗೆ ಬೆಂಕಿ ಹಚ್ಚಿ ಉರಿಸುವರು. ಏಕೆಂದರೆ ಆ ಪ್ರಜೆಯು ಬುದ್ಧಿಹೀನವಾದವರೇ. ಆದಕಾರಣ ಸೃಷ್ಟಿಸಿದಾತನು ಅವರಿಗೆ ಕರುಣೆ ತೋರಿಸುವುದಿಲ್ಲ, ನಿರ್ಮಿಸಿದಾತನು ಅವರಿಗೆ ದಯೆತೋರಿಸುವುದಿಲ್ಲ.
Kannada BSI Bible 2016
ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿ ಯಲ್ಪಡುವವು, ಹೆಂಗಸರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು; ಅದು ವಿವೇಕವುಳ್ಳ ಜನ ವಲ್ಲ. ಆದದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವದಿಲ್ಲ. ಅವರನ್ನು ರೂಪಿಸಿದಾತನು ಅವರನ್ನು ಕರುಣಿಸುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿನ ರೆಂಬೆಗಳು ಒಣಗಿ ಮುರಿದುಹೋಗುವವು, ಹೆಂಗಸರು ಬಂದು ಬೆಂಕಿ ಹಚ್ಚಿ ಉರಿಸುವರು; ಆ ಪ್ರಜೆಯು ಬುದ್ಧಿಹೀನವಾದದ್ದೇ ಸರಿ; ಆದಕಾರಣ ಸೃಷ್ಟಿಸಿದಾತನು ಅದನ್ನು ಕರುಣಿಸನು, ನಿರ್ಮಿಸಿದಾತನು ಅದಕ್ಕೆ ದಯೆತೋರಿಸನು.
Kannada Bible (KNCL) BSI 2016
ಮರಗಳ ರೆಂಬೆಕೊಂಬೆಗಳು ಒಣಗಿ ಮುರಿದುಹೋಗಿವೆ. ಹೆಂಗಸರ ಕೈಗೆ ಒಲೆಪಾಲಾಗುವ ಸೌದೆಯಾಗಿವೆ. ಈ ಪ್ರಜೆಗಳು ಮಂದಮತಿಗಳೇ ಸರಿ. ಈ ಕಾರಣ, ಸೃಷ್ಟಿಕರ್ತನು ಇವರನ್ನು ಕರುಣಿಸನು. ನಿರ್ಮಿಸಿದಾತನು ಇವರಿಗೆ ದಯೆ ತೋರಿಸನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿನ ರೆಂಬೆಗಳು ಒಣಗಿ ಮುರಿದುಹೋಗಿವೆ. ಸ್ತ್ರೀಯರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು. ಏಕೆಂದರೆ ಇದು ವಿವೇಕವಿಲ್ಲದ ಜನ. ಆದ್ದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವುದಿಲ್ಲ. ಅವರ ಸೃಷ್ಟಿಕರ್ತನು ಅವರನ್ನು ಕರುಣಿಸುವುದಿಲ್ಲ.