Isaiah 27:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯೆಹೋವನಾದ ನಾನು ಆ ತೋಟವನ್ನು ಚೆನ್ನಾಗಿ ನೋಡಿಕೊಳ್ಳುವೆನು; ಸರಿಯಾದ ಕಾಲದಲ್ಲಿ ತೋಟಕ್ಕೆ ನೀರು ಹೊಯ್ಯುವೆನು. ಹಗಲಿರುಳು ತೋಟವನ್ನು ಕಾಯುವೆನು. ಆ ತೋಟವನ್ನು ಯಾರೂ ಹಾಳುಮಾಡುವದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಯೆಹೋವನಾದ ನಾನೇ ಅದನ್ನು ಕಾಯುತ್ತೇನೆ. ಪ್ರತಿ ಕ್ಷಣವೂ ಅದಕ್ಕೆ ನೀರು ಹೊಯ್ಯುತ್ತಿದ್ದೇನೆ; ಯಾರೂ ಅದಕ್ಕೆ ಕೇಡು ಮಾಡದ ಹಾಗೆ ಹಗಲಿರುಳೂ ಕಾಯುತ್ತೇನೆ.
Kannada BSI Bible 2016
ಕರ್ತನಾದ ನಾನೇ ಅದನ್ನು ಕಾಯುತ್ತೇನೆ, ಕ್ಷಣ ಕ್ಷಣವೂ ಅದಕ್ಕೆ ನೀರು ಹೊಯ್ಯುತ್ತಿದ್ದೇನೆ; ಯಾರೂ ಅದಕ್ಕೆ ಕೇಡು ಮಾಡದ ಹಾಗೆ ರಾತ್ರಿ ಹಗಲು ಅದನ್ನು ಕಾಯುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನಾದ ನಾನು ತೋಟಗಾರನು, ಕ್ಷಣಕ್ಷಣವೂ ನೀರು ಹೊಯ್ಯುತ್ತಿದ್ದೇನೆ; ಯಾರೂ ಮುಟ್ಟದ ಹಾಗೆ ಹಗಲಿರುಳೂ ಕಾಯುತ್ತೇನೆ.
Kannada Bible (KNCL) BSI 2016
ಸರ್ವೇಶ್ವರನಾದ ನಾನೇ ಇದರ ತೋಟಗಾರ, ಕ್ಷಣಕ್ಷಣಕ್ಕೂ ಇದಕೆ ಹೊಯ್ಯುವೆ ನೀರ, ಇದನ್ನಾದರೂ ಮುಟ್ಟದಂತೆ ಕಾಯುವೆ ನಿರಂತರ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರಾದ ನಾನೇ ಅದನ್ನು ಕಾಯುತ್ತೇನೆ. ಸತತವಾಗಿ ಅದಕ್ಕೆ ನೀರು ಹೊಯ್ಯುತ್ತಿದ್ದೇನೆ. ಯಾರೂ ಅದಕ್ಕೆ ಕೇಡು ಮಾಡದ ಹಾಗೆ ರಾತ್ರಿ ಹಗಲು ಅದನ್ನು ಕಾಯುತ್ತೇನೆ.