Isaiah 27:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ತನ್ನ ಜನರನ್ನು ಹೇಗೆ ಶಿಕ್ಷಿಸುವನು? ಹಿಂದಿನ ಕಾಲದಲ್ಲಿ ಶತ್ರುಗಳು ಜನರನ್ನು ಗಾಯಪಡಿಸಿದರು. ಯೆಹೋವನೂ ಹಾಗೆ ಮಾಡುವನೇ? ಹಿಂದಿನ ಕಾಲದಲ್ಲಿ ಅನೇಕ ಮಂದಿ ಕೊಲ್ಲಲ್ಪಟ್ಟರು. ಹಾಗೆಯೇ ಯೆಹೋವನು ಜನರನ್ನು ಕೊಲ್ಲುವನೇ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಬೇರೆ ದೇಶಗಳನ್ನು ಹೊಡೆದಂತೆ ತನ್ನ ಪ್ರಜೆಯಾದ ಯಾಕೋಬ ಮತ್ತು ಇಸ್ರಾಯೇಲರನ್ನು ಹೊಡೆದನೋ? ಇತರ ದೇಶದವರು ಸಂಹರಿಸಲ್ಪಟ್ಟಂತೆ ಯಾಕೋಬ ಮತ್ತು ಇಸ್ರಾಯೇಲರು ಸಂಹರಿಸಲ್ಪಟ್ಟರೋ?
Kannada BSI Bible 2016
ಆತನನ್ನು ಹೊಡೆದವನನ್ನು ಹೊಡೆದ ಪ್ರಕಾರ ಅವನನ್ನು ಹೊಡೆದನೋ? ಇಲ್ಲವೆ ಆತನಿಂದ ಕೊಲ್ಲಲ್ಪಟ್ಟವರು ಕೊಲ್ಲಲ್ಪಟ್ಟ ಪ್ರಕಾರ ಅವನನ್ನು ಕೊಂದನೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ತನ್ನ ಪ್ರಜೆಯ ಘಾತಕರನ್ನು ಹೊಡೆದಂತೆ ಆ ತನ್ನ ಪ್ರಜೆಯನ್ನು ಹೊಡೆದನೋ? ಅವರಿಗಾದಂಥ ಸಂಹಾರವು ಆ ಪ್ರಜೆಗೆ ಆಯಿತೋ?
Kannada Bible (KNCL) BSI 2016
ಸರ್ವೇಶ್ವರ ತಮ್ಮ ಪ್ರಜೆಯ ಘಾತುಕರನ್ನು ದಂಡಿಸಿದಷ್ಟು ತಮ್ಮ ಪ್ರಜೆಯನ್ನು ದಂಡಿಸಲಿಲ್ಲ. ಘಾತುಕರಿಗಾದ ಪ್ರಾಣನಷ್ಟ ತಮ್ಮ ಪ್ರಜೆಗೆ ಆಗಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಕೆಯನ್ನು ಹೊಡೆದವರನ್ನು ಆತನು ಹೊಡೆದಂತೆ ಯೆಹೋವ ದೇವರು ಆಕೆಯನ್ನು ಹೊಡೆದರೋ? ಆಕೆಯನ್ನು ಕೊಂದವರು ಹತರಾದಂತೆ ಆಕೆಯು ಸಂಹಾರವಾದಳೋ?