Isaiah 27:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ತನ್ನ ಜನರನ್ನು ದೂರದೇಶಕ್ಕೆ ಕಳುಹಿಸುವದರ ಮೂಲಕ ಅವರನ್ನು ಶಿಕ್ಷಿಸುವನು. ಇಸ್ರೇಲರೊಂದಿಗೆ ಯೆಹೋವನು ಕಟುವಾಗಿ ಮಾತನಾಡುವನು. ಆತನ ಮಾತುಗಳು ಮರುಭೂಮಿಯ ಬಿಸಿಗಾಳಿಯಂತೆ ಸುಡುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಪ್ರಜೆಯನ್ನು ಕಳುಹಿಸಿಬಿಡುವದರ ಮೂಲಕ ಅದರೊಡನೆ ಮಿತಿಮೀರದೆ ಹೋರಾಡುತ್ತಿದ್ದೀ; ಮೂಡಣದಿಂದ ಗಾಳಿಯು ಬೀಸುವ ದಿನದಲ್ಲಿ ಅದರ ಕ್ರೂರ ಹೊಡೆತದಿಂದ ನಿನ್ನ ಜನರನ್ನು ಹೊರಗೆ ಕಳುಹಿಸಿದೆ.
Kannada BSI Bible 2016
ಮಿತಿಯಾಗಿ ಕಳುಹಿಸಿ ಬಿಡುವದರ ಮೂಲಕ ಅದರೊಡನೆ ವಿವಾದ ಮಾಡಿದಿ. ಮೂಡಣ ಗಾಳಿಯು ಬೀಸುವ ದಿನದಲ್ಲಿ ತನ್ನ ಬಲವಾದ ವಾಯು ವಿನಿಂದ ಆತನು ಅದನ್ನು ತೊಲಗಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಪ್ರಜೆಯನ್ನು ಕಳುಹಿಸಿಬಿಡುವದರ ಮೂಲಕ ಅದರೊಡನೆ ವಿುತಿಮೀರದೆ ಹೋರಾಡುತ್ತಿದ್ದೀ; ಮೂಡಣ ಗಾಳಿಯು ಬೀಸಿದ ದಿನದಲ್ಲಿ ಅದರ ಕ್ರೂರವಾದ ಬಡಿತದಿಂದ ನಿನ್ನ ಜನವನ್ನು ತೊಲಗಿಸಿದಿ.
Kannada Bible (KNCL) BSI 2016
ಆದರೂ ಸರ್ವೇಶ್ವರ ತಮ್ಮ ಪ್ರಜೆಗೆ ಗಡೀಪಾರು ಶಿಕ್ಷೆಯನ್ನು ವಿಧಿಸಿದರು. ದೂರದ ಮೂಡಣ ಬಿರುಗಾಳಿಯ ಬಡಿತಕ್ಕೆ ಗುರಿಮಾಡಿ ಅವರನ್ನು ತೊಲಗಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯುದ್ಧದಿಂದಲೂ ಸೆರೆಯಿಂದಲೂ ಆಕೆಯೊಂದಿಗೆ ತೃಪ್ತರಾಗಿರಿ. ಆತನು ತನ್ನ ಕೋಪದ ಪೆಟ್ಟಿನಿಂದ ಪೂರ್ವದ ಬಿರುಗಾಳಿ ಬೀಸುವಾಗ ಆಗುವಂತೆ, ಆಕೆಯನ್ನು ಹೊರಗೋಡಿಸುವನು.