Isaiah 28:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಮಾರ್ಯದ ಕಡೆಗೆ ನೋಡು! ಎಫ್ರಾಯೀಮಿನ ಮತ್ತರಾದ ಜನರು ಆ ಪಟ್ಟಣದ ಬಗ್ಗೆ ಬಹಳ ಅಭಿಮಾನಪಡುತ್ತಿದ್ದಾರೆ. ಆ ನಗರವು ಪರ್ವತದ ಮೇಲಿರುವುದು; ಅದರ ಸುತ್ತಲೂ ಫಲವತ್ತಾದ ಕಣಿವೆ ಇರುವುದು. ಸಮಾರ್ಯದ ಜನರು ತಮ್ಮ ನಗರವು ಸುಂದರವಾದ ಕಿರೀಟವೆಂದು ನೆನಸುತ್ತಾರೆ. ಆದರೆ ಅವರು ಕುಡಿದು ಮತ್ತರಾಗಿದ್ದಾರೆ. ಅವರ “ಸುಂದರ ಕಿರೀಟವು” ಒಣಗಿದ ತರಗೆಲೆಯಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಯ್ಯೋ, ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟದ ಗತಿಯೇ! ದ್ರಾಕ್ಷಾರಸಕ್ಕೆ ಸೋತು ಹೋದವರ ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು, ಬಾಡುತ್ತಿರುವ ಹೂವಿನ ಪಾಡೇ!
Kannada BSI Bible 2016
ಎಫ್ರಾಯಾಮ್ಯರ ಕುಡುಕರ ಗರ್ವದ ಕಿರೀಟಕ್ಕೆ ಅಯ್ಯೋ! ದ್ರಾಕ್ಷಾರಸದಿಂದ ಅಮಲೇರಿದವರ ಕೊಬ್ಬುಳ್ಳ ತಗ್ಗಿನ ತಲೆಯ ಮೇಲಿ ರುವ ಅವರ ಅಹಂಕಾರದ ಕಿರೀಟವು ಬಾಡಿದ ಹೂವಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಯ್ಯೋ, ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟದ ಗತಿಯೇ! ದ್ರಾಕ್ಷಾರಸಕ್ಕೆ ಸೋತುಹೋದವರ ಫಲವತ್ತಾದ ತಗ್ಗಿಗೆ ಶ್ರೇಷ್ಠ ಶಿರೋಭೂಷಣವಾಗಿದ್ದು ಬಾಡುತ್ತಿರುವ ಹೂವಿನ ಪಾಡೇ!
Kannada Bible (KNCL) BSI 2016
ಕುಡುಕರಿಂದ ಕೂಡಿದ ಎಫ್ರಯಿಮಿನ ಕಿರೀಟದಂತಿರುವ ನಗರಕ್ಕೆ ಧಿಕ್ಕಾರ! ಒಮ್ಮೆ ಕುಡಿತಕ್ಕೆ ಸೋತು ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು ಈಗ ಬಾಡಿಹೋಗುತ್ತಿರುವ ಆ ಹೂವಿಗೆ ಧಿಕ್ಕಾರ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕುಡುಕರಿಂದ ಕೂಡಿದ ಎಫ್ರಾಯೀಮಿನ ಕಿರೀಟದಂತಿರುವ ನಗರಕ್ಕೆ ಕಷ್ಟ! ಒಮ್ಮೆ ಕುಡಿತಕ್ಕೆ ಸೋತು ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು, ಈಗ ಬಾಡಿಹೋಗುತ್ತಿರುವ ಆ ಹೂವಿಗೆ ಕಷ್ಟ!