Isaiah 28:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಆತನ ಮಾತು ಅವರಿಗೆ ಪರಭಾಷೆಯಂತೆ ಕೇಳಿಸುವುದು. “ಸಾ ಲಸಾವ್ ಸಾ ಲಸಾವ್ ಖಾವ್ ಲಖಾವ್ ಖಾವ್ ಲಖಾವ್ ಜೆಯಿರ್ ಶಾಮ್ ಜೆಯಿರ್ ಶಾಮ್.” ಜನರು ತಮ್ಮ ಇಷ್ಟಪ್ರಕಾರ ನಡೆದರು. ಆದ್ದರಿಂದ ಅವರು ಸೋಲಿಸಲ್ಪಟ್ಟರು. ಅವರು ಉರುಲಿಗೆ ಸಿಕ್ಕಿ ಹಾಕಿಕೊಂಡು ಹಿಡಿಯಲ್ಪಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲು ಯೆಹೋವನ ಮಾತು ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಇಲ್ಲಿ ಸ್ವಲ್ಪ, ಅಲ್ಲಿ ಸ್ವಲ್ಪ ಎಂಬುದಾಗಿ ಇವರಿಗೆ ಪರಿಣಮಿಸುವುದು; ಇವರು ನಡೆದು ಹಿಂದೆ ಬಿದ್ದು ಭಂಗಪಡುವರು, ಬೋನಿಗೆ ಸಿಕ್ಕಿ ವಶವಾಗುವರು.
Kannada BSI Bible 2016
ಆದರೆ ಅವರು ಹೋಗಿ ಹಿಂದಕ್ಕೆ ಎಡವಿ ಮುರಿದುಕೊಳ್ಳುವ ಹಾಗೆಯೂ ಬೋನಿನಲ್ಲಿ ಹಿಡಿ ಯಲ್ಪಟ್ಟು ಸಿಕ್ಕಿಬೀಳುವ ಹಾಗೆಯೂ ಕರ್ತನ ವಾಕ್ಯವು ಅವರಿಗೆ ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ ಅಲ್ಲಿ ಸ್ವಲ್ಪ, ಇಲ್ಲಿ ಸ್ವಲ್ಪ ಇರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ಯೆಹೋವನ ಮಾತು ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಇಲ್ಲಿ ಸ್ವಲ್ಪ, ಅಲ್ಲಿ ಸ್ವಲ್ಪ ಎಂಬದಾಗಿ ಇವರಿಗೆ ಪರಿಣವಿುಸುವದು; ಇವರು ನಡೆದು ಹಿಂದೆಬಿದ್ದು ಭಂಗಪಡುವರು, ಬೋನಿಗೆ ಸಿಕ್ಕಿ ವಶವಾಗುವರು.
Kannada Bible (KNCL) BSI 2016
ಆದುದರಿಂದಲೇ ಸರ್ವೇಶ್ವರ ನಿಮಗೆ;ಆಜ್ಞೆಯ ಮೇಲೆ ಅಜ್ಞೆ, ಸೂತ್ರದ ಮೇಲೆ ಸೂತ್ರ, ಅಲ್ಲಿ ಸ್ವಲ್ಪ, ಇಲ್ಲಿ ಸ್ವಲ್ಪ’ ಎಂದು ಹೇಳಿ ಪಾಠಕಲಿಸುವರು. ಆಗ ನೀವು ನಡೆ ನಡೆದೂ ಎಡವಿ ಬೀಳುವಿರಿ, ಗಾಯಗೊಳ್ಳುವಿರಿ. ಉರುಲಿಗೆ ಸಿಕ್ಕಿಬೀಳುವಿರಿ, ಬಂಧನಕ್ಕೊಳಗಾಗುವಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರು ಅವರಿಗೆ ಹೀಗೆ ಹೇಳಿದರು: ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಇಲ್ಲಿ ಸ್ವಲ್ಪ, ಅಲ್ಲಿ ಸ್ವಲ್ಪ ಇದರಿಂದ ಅವರು ಎಡವಿಬಿದ್ದು ಗಾಯಗೊಳ್ಳಬಹುದು. ಮತ್ತು ಬಲೆಯಲ್ಲಿ ಸಿಕ್ಕಿ ಬೀಳುವರು.