Isaiah 28:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದಕ್ಕೋಸ್ಕರವಾಗಿಯೇ, ನನ್ನ ಒಡೆಯನಾದ ಯೆಹೋವನು ಹೀಗೆನ್ನುವನು: “ಚೀಯೋನಿನಲ್ಲಿ ನಾನು ಒಂದು ಮೂಲೆಗಲ್ಲು ಇಡುವೆನು, ಇದು ಬಹು ಅಮೂಲ್ಯವಾದ ಕಲ್ಲು. ಈ ವಿಶೇಷವಾದ ಕಲ್ಲಿನ ಮೇಲೆ ಎಲ್ಲವೂ ಕಟ್ಟಲ್ಪಡುವದು. ಆ ಕಲ್ಲಿನ ಮೇಲೆ ಭರವಸವಿಡುವ ಯಾವನು ಆಶಾಭಂಗಪಡುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ಕರ್ತನಾದ ಯೆಹೋವನು ಹೀಗೆ ಹೇಳುತ್ತಾನೆ, “ಇಗೋ, ಪರೀಕ್ಷೆಗೆ ಒಳಗಾಗಿ, ಮಾನ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ, ಸ್ಥಿರವಾದ ಆಸ್ತಿವಾರವನ್ನಾಗಿ ಇಡುತ್ತೇನೆ; ಭರವಸವಿಡುವವನು ಆತುರಪಡನು.
Kannada BSI Bible 2016
ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಪರೀಕ್ಷಿತವಾಗಿಯೂ ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಆಸ್ತಿವಾರವನ್ನಾಗಿ ಇಡು ತ್ತೇನೆ; ವಿಶ್ವಾಸವಿಡುವವನು ಆತುರಪಡನು (ಆಶಾ ಭಂಗ ಪಡುವದಿಲ್ಲ).
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನು ಹೀಗೆ ಹೇಳುತ್ತಾನೆ - ಇಗೋ, ಪರೀಕ್ಷಿತವಾಗಿಯೂ ಮಾನ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಅಸ್ತಿವಾರವನ್ನಾಗಿ ಇಡುತ್ತೇನೆ; ಭರವಸವಿಡುವವನು ಆತುರಪಡನು.
Kannada Bible (KNCL) BSI 2016
ಎಂದೇ, ಒಡೆಯರಾದ ಸರ್ವೇಶ್ವರ ಹೀಗೆನ್ನುತ್ತಾರೆ: ‘ಇಗೋ, ನಾನು ಸಿಯೋನಿನಲ್ಲಿ ಅಸ್ತಿವಾರದ ಕಲ್ಲೊಂದನ್ನು ಇಡುತ್ತೇನೆ. ಅದು ಸ್ಥಿರವಾದ, ಪರೀಕ್ಷಿತವಾದ, ಮೌಲ್ಯವಾದ ಮೂಲೆಗಲ್ಲು. ಇದರಲ್ಲಿ ವಿಶ್ವಾಸವಿಡುವವನು ತಾಳ್ಮೆಯಿಂದ ಬಾಳುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಪರೀಕ್ಷಿತವಾಗಿಯೂ, ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಅಸ್ತಿವಾರವನ್ನಾಗಿ ಇಡುತ್ತೇನೆ. ಭರವಸೆ ಇಡುವವನು ಆತುರಪಡನು.