Isaiah 28:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಗೋಡೆಯು ನೆಟ್ಟಗಿದೆಯೆಂದು ನೋಡಲು ಜನರು ಗುಂಡನ್ನೂ ನೂಲನ್ನೂ ಉಪಯೋಗಿಸುತ್ತಾರೆ. ಅದೇ ರೀತಿಯಲ್ಲಿ ನಾನು ನ್ಯಾಯವನ್ನು ನೂಲನ್ನಾಗಿಯೂ ಕರುಣೆಯನ್ನು ಗುಂಡನ್ನಾಗಿಯೂ ಉಪಯೋಗಿಸುವೆನು. ನೀವು ದುಷ್ಟಜನರು. ನೀವು ನಿಮ್ಮ ಸುಳ್ಳುಮೋಸಗಳ ಹಿಂದೆ ಅವಿತುಕೊಳ್ಳುತ್ತಿದ್ದೀರಿ. ಆದರೆ ನೀವು ಶಿಕ್ಷಿಸಲ್ಪಡುವಿರಿ. ನೀವು ಅಡಗಿಕೊಂಡಿರುವ ಸ್ಥಳವನ್ನು ನಾಶಮಾಡುವ ಬಿರುಗಾಳಿಯಂತೆಯೂ ಪ್ರವಾಹದಂತೆಯೂ ಅದಿರುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನ್ಯಾಯವನ್ನು ನೂಲನ್ನಾಗಿಯೂ, ಧರ್ಮವನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಸುಳ್ಳಿನ ಆಶ್ರಯವನ್ನು ಬಡಿದುಕೊಂಡು ಹೋಗುವುದು, ಜಲಪ್ರವಾಹವು ಮೋಸದ ಅಡಗು ಸ್ಥಳವನ್ನು ಮುಳುಗಿಸುವುದು.
Kannada BSI Bible 2016
ನಾನು ನ್ಯಾಯವನ್ನು ನೂಲ ನ್ನಾಗಿಯೂ ನೀತಿಯನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಸುಳ್ಳಿನ ಆಶ್ರಯವನ್ನು (ಗುಡಿಸಿ) ಬಡಿದುಕೊಂಡು ಹೋಗುವದು, ಅಡ ಗುವ ಸ್ಥಾನವನ್ನು ಜಲಪ್ರವಾಹವು ಮುಳುಗಿಸಿಬಿಡು ವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನ್ಯಾಯವನ್ನು ನೂಲನ್ನಾಗಿಯೂ ಧರ್ಮವನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಅಸತ್ಯದ ಆಶ್ರಯವನ್ನು ಬಡಿದುಕೊಂಡು ಹೋಗುವದು, ಜಲಪ್ರವಾಹವು [ಮೋಸದ] ಮರೆಯನ್ನು ಮುಣುಗಿಸುವದು.
Kannada Bible (KNCL) BSI 2016
ನ್ಯಾಯನೀತಿಯನ್ನು ಅದರ ಅಳತೆಗೋಲನ್ನಾಗಿಯೂ ಸತ್ಯಸಂಧತೆಯನ್ನು ಅದರ ಮಟ್ಟಗೋಲನ್ನಾಗಿಯೂ ಮಾಡುತ್ತೇನೆ. ನಿಮ್ಮ ಅಸತ್ಯದಆಶ್ರಯವನ್ನು ಕಲ್ಮಳೆ ಕೊಚ್ಚಿಕೊಂಡು ಹೋಗುವುದು. ಜಲಪ್ರವಾಹವು ನಿಮ್ಮ ಮೋಸದ ಆಸರೆಯನ್ನು ಮುಳುಗಿಸುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನ್ಯಾಯವನ್ನು ಅಳತೆಗೋಲನ್ನಾಗಿಯೂ ಮತ್ತು ನೀತಿಯನ್ನು ಮಟ್ಟಗೋಲನ್ನಾಗಿಯೂ ಮಾಡುವೆನು. ಕಲ್ಮಳೆಯು ಸುಳ್ಳಿನ ಆಶ್ರಯವನ್ನು ಬಡಿದುಕೊಂಡು ಹೋಗುವುದು. ಅಡಗುವ ಸ್ಥಾನವನ್ನು ಜಲಪ್ರವಾಹವು ಮುಳುಗಿಸಿ ಬಿಡುವುದು.