Isaiah 28:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆತನು ಬಂದು ನಿಮ್ಮನ್ನು ತೆಗೆದುಕೊಂಡು ಹೋಗುವನು. ನಿಮಗೆ ದೊರಕುವ ಶಿಕ್ಷೆ ಬಹು ಭಯಂಕರವಾದದ್ದು. ಅದರ ಬಗ್ಗೆ ನೀವು ಕೇಳಿದ ಕೂಡಲೇ ಚಿಂತಿಸಲಾರಂಭಿಸುವಿರಿ. ಅದು ಮುಂಜಾನೆ ಬಂದು ರಾತ್ರಿ ಬಹು ಹೊತ್ತಿನ ತನಕ ಇರುವದು. “ಆಗ ನೀವು ಈ ಕಥೆಯನ್ನು ಅರ್ಥಮಾಡಿಕೊಳ್ಳುವಿರಿ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದು ಹಾದುಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವುದು; ಹೊತ್ತಾರೆಯಿಂದ ಹೊತ್ತಾರೆಗೆ ಹಗಲು ರಾತ್ರಿಯೂ ಹಾದುಹೋಗುವುದು; ಆಗ ಯೆಹೋವನ ಮಾತನ್ನು ಗ್ರಹಿಸಿಕೊಳ್ಳುವುದರಿಂದ ಭಯವಾಗುವುದು.
Kannada BSI Bible 2016
ಅದು ಹಾದು ಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವದು. ಅದು ಹೊತ್ತಾರೆಯಿಂದ ಹೊತ್ತಾರೆಗೆ (ಬೆಳಬೆಳಕೂ) ಹಗಲು ರಾತ್ರಿಯೂ ಹಾದು ಹೋಗುವದು; ಅದರ ಸುದ್ದಿ ಯನ್ನು ತಿಳುಕೊಳ್ಳುವದರಿಂದ ಭಯವಾಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು ಹಾದುಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವದು; ಬೆಳಬೆಳಗೂ ಹಗಲುರಾತ್ರಿಯೂ ಅದು ಹಾದುಹೋಗುವದು; ಆಗ ಯೆಹೋವನ ಮಾತನ್ನು ಗ್ರಹಿಸಿಕೊಳ್ಳುವದು ಬರೀ ಭಯವೇ.
Kannada Bible (KNCL) BSI 2016
ಅದು ಹಾದುಹೋಗುವಾಗಲೆಲ್ಲಾ ನಿಮ್ಮನ್ನು ಹಿಡಿದುಬಿಡುವುದು. ಪ್ರತಿದಿನವೂ ಹಗಲೂ ರಾತ್ರಿ ಅದು ಹಾದುಹೋಗುವುದು. ಸರ್ವೇಶ್ವರ ಸ್ವಾಮಿಯ ಈ ಸಂದೇಶವನ್ನು ಅರ್ಥಮಾಡಿಕೊಳ್ಳುವವರಿಗೆ ಭಯಭ್ರಾಂತಿ ಉಂಟಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದು ಹಾದುಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವುದು. ಏಕೆಂದರೆ ಅದು ಹೊತ್ತಾರೆಯಿಂದ ಹೊತ್ತಾರೆಗೆ, ಹಗಲು ರಾತ್ರಿಯೂ ಹಾದುಹೋಗುವುದು.” ಆಗ ದೇವರ ಈ ಸಂದೇಶವನ್ನು ಅರ್ಥಮಾಡಿಕೊಳ್ಳುವವರಿಗೆ ಭಯಭ್ರಾಂತಿ ಉಂಟಾಗುವುದು.