Isaiah 28:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಗೋ, ನನ್ನ ಒಡೆಯನಿಗೆ ಬಲಿಷ್ಠನೂ ಧೈರ್ಯವಂತನೂ ಆಗಿರುವ ಒಬ್ಬನಿದ್ದಾನೆ. ಅವನು ದೇಶದೊಳಗೆ ಆಲಿಕಲ್ಲಿನ ಮಳೆಯಿಂದ ಕೂಡಿದ ಬಿರುಗಾಳಿಯಂತೆಯೂ ನದಿಯ ಬಲವಾದ ಪ್ರವಾಹವು ದೇಶದೊಳಗೆ ನುಗ್ಗಿಬರುವಂತೆಯೂ ಅವನು ಬರುವನು. ಆ ಕಿರೀಟವನ್ನು (ಸಮಾರ್ಯ) ನೆಲದ ಮೇಲೆ ಬಿಸಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಹಾ, ಕರ್ತನು ಒಬ್ಬ ಮಹಾಬಲಿಷ್ಠನನ್ನು ನೇಮಿಸಿದ್ದಾನೆ; ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ, ನಾಶಕರವಾದ ಬಿರುಗಾಳಿಯಂತೆಯೂ, ಮುಳುಗಿಸುವ ಅತಿಧಾರಾವೃಷ್ಟಿಯಂತೆಯೂ ಬಲಾತ್ಕಾರದಿಂದ ಆ ಪಟ್ಟಣವನ್ನು ತನ್ನ ಕೈಯಿಂದ ಅಧೋಗತಿಗೆ ತರುವನು.
Kannada BSI Bible 2016
ಇಗೋ, ಕರ್ತನಿಗೆ ಒಬ್ಬ ಮಹಾ ಬಲಿಷ್ಠನು ಇದ್ದಾನೆ. ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ ಹೊಡೆದುಬಿಡುವ ಬಿರುಗಾಳಿ ಯಂತೆಯೂ ಪ್ರಳಯಮಾಡುವ ಪ್ರಚಂಡ ಮಳೆ ಯನ್ನು ತರುವ ಬಿರುಗಾಳಿಯಂತೆಯೂ ಅದನ್ನು ಕೈ ಯಿಂದ ನೆಲಕ್ಕೆ ಬೀಳಿಸುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾ, ಕರ್ತನು ಒಬ್ಬ ಮಹಾ ಬಲಿಷ್ಠನನ್ನು ನೇವಿುಸಿದ್ದಾನೆ; ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ ನಾಶಕವಾದ ಬಿರುಗಾಳಿಯೋಪಾದಿಯಲ್ಲಿಯೂ ಮುಣುಗಿಸುವ ಅತಿಧಾರಾವೃಷ್ಟಿಯ ಹಾಗೂ ಬಲಾತ್ಕಾರದಿಂದ [ಆ ಪಟ್ಟಣವನ್ನು] ನೆಲಕ್ಕೆ ಬೀಳಿಸುವನು.
Kannada Bible (KNCL) BSI 2016
ಇದೋ, ಸರ್ವೇಶ್ವರ ಸ್ವಾಮಿ ಬಳಿ ಮಹಾ ಬಲಿಷ್ಠನೊಬ್ಬನು ಇದ್ದಾನೆ. ಆತನು ರಭಸವಾಗಿರುವ ಕಲ್ಮಳೆಯಂತೆ, ವಿನಾಶಕರವಾದ ಬಿರುಗಾಳಿಯಂತೆ, ಕೊಚ್ಚಿ ಹರಿಯುವ ತುಂಬು ಪ್ರವಾಹದಂತೆ ಬರುವನು. ಆ ನಗರ ನೆಲಕ್ಕೆ ಕುಸಿದುಬಿದ್ದು ನೆಲಸಮವಾಗುವಂತೆ ಮಾಡುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಗೋ, ಕರ್ತರಿಗೆ ಒಬ್ಬ ಮಹಾ ಬಲಿಷ್ಠನು ಇದ್ದಾನೆ. ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ, ಹೊಡೆದು ಬಿಡುವ ಬಿರುಗಾಳಿಯಂತೆಯೂ, ಪ್ರಳಯ ಮಾಡುವ ದೊಡ್ಡ ನೀರನ್ನು ತರುವ ಬಿರುಗಾಳಿಯಂತೆಯೂ ಅದನ್ನು ಕೈಯಿಂದ ಬೀಳಿಸುವನು.