Isaiah 28:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪೆರಾಚೀಮ್ ಬೆಟ್ಟದ ಮೇಲೆ ಯೆಹೋವನು ಯುದ್ಧ ಮಾಡಿದಂತೆಯೇ ಆತನು ಯುದ್ಧಮಾಡುವನು. ಗಿಬ್ಯೋನ್ ಕಣಿವೆಯಲ್ಲಿ ಯೆಹೋವನು ಕೋಪಗೊಂಡಿದ್ದಂತೆಯೇ ಕೋಪಗೊಳ್ಳುವನು. ಆಗ ಆತನು ಮಾಡಬೇಕಾದ ಕಾರ್ಯಗಳನ್ನು ಮಾಡುವನು. ಯೆಹೋವನು ಕೆಲವು ಅಪರಿಚಿತವಾದ ಸಂಗತಿಗಳನ್ನು ಮಾಡುವನು. ಆದರೆ ಆತನು ತನ್ನ ಕಾರ್ಯವನ್ನು ಮಾಡಿಮುಗಿಸುವನು. ಆ ಕೆಲಸವು ಒಬ್ಬ ಪರಿಚಯವಿಲ್ಲದವನ ಕೆಲಸವಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಈಗ ಅಪರೂಪವಾದ ತನ್ನ ಕೆಲಸವನ್ನು ನಡೆಸಬೇಕೆಂತಲೂ, ಅಪೂರ್ವವಾದ ತನ್ನ ಕಾರ್ಯವನ್ನು ನೆರವೇರಿಸಬೇಕೆಂತಲೂ ಪೆರಾಚೀಮ್ ಬೆಟ್ಟದಲ್ಲಿ ಎದ್ದಂತೆ ಏಳುವನು, ಗಿಬ್ಯೋನ್ ಕಣಿವೆಯಲ್ಲಿ ರೋಷಗೊಂಡಂತೆ ರೋಷಗೊಳ್ಳುವನು.
Kannada BSI Bible 2016
ಕರ್ತನು ಪೆರಾಚೀಮ್‌ ಪರ್ವತದಲ್ಲಿ ಅದರ ಹಾಗೆ ಎದ್ದು ಗಿಬ್ಯೋನ್‌ ತಗ್ಗಿನಲ್ಲಿ ಆದ ಹಾಗೆ ಕೋಪಿಸಿ ಅಪರೂಪವಾದ ತನ್ನ ಕೆಲಸ ವನ್ನು ನಡಿಸಿ ಅಪೂರ್ವವಾದ ತನ್ನ ಕಾರ್ಯವನ್ನು ನೇರವೇರಿಸುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಈಗ ಅಪರೂಪವಾದ ತನ್ನ ಕೆಲಸವನ್ನು ನಡಿಸಬೇಕೆಂತಲೂ ಅಪೂರ್ವವಾದ ತನ್ನ ಕಾರ್ಯವನ್ನು ನೆರವೇರಿಸಬೇಕೆಂತಲೂ ಪೆರಾಚೀಮ್ ಬೆಟ್ಟದಲ್ಲಿ ಎದ್ದಂತೆ ಏಳುವನು, ಗಿಬ್ಯೋನ್ ತಗ್ಗಿನಲ್ಲಿ ರೋಷಗೊಂಡಂತೆ ರೋಷಗೊಳ್ಳುವನು.
Kannada Bible (KNCL) BSI 2016
ಒಮ್ಮೆ ಸರ್ವೇಶ್ವರ ಪೆರಾಚೀಮ್ ಬೆಟ್ಟದ ಮೇಲೆ ಎದ್ದಂತೆ ಏಳುವರು; ಗೊಬ್ಯೋನ್ ಕಣಿವೆಯಲ್ಲಿ ರೋಷಗೊಂಡಂತೆ ರೋಷಗೊಳ್ಳುವರು. ಆಗ ಅಸಾಧಾರಣ ಕಾರ್ಯವೊಂದನ್ನು ನಡೆಸುವರು; ಅಪೂರ್ವವಾದ ತಮ್ಮ ಕೆಲಸವನ್ನು ನೆರವೇರಿಸುವರು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಪೆರಾಚೀಮ್ ಪರ್ವತದಲ್ಲಿ ಎದ್ದಂತೆ ಏಳುವರು. ಹಾಗೆ ಎದ್ದು ಗಿಬ್ಯೋನ್ ತಗ್ಗಿನಲ್ಲಿ ಆದ ಹಾಗೆ ಕೋಪಿಸಿ, ಅಪರೂಪವಾದ ತಮ್ಮ ಕೆಲಸವನ್ನು ನಡಿಸಿ, ಅಪೂರ್ವವಾದ ತಮ್ಮ ಕಾರ್ಯವನ್ನು ನೆರವೇರಿಸುವನು.