Isaiah 28:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈಗ ನೀವು ಆ ವಿಷಯಗಳೊಂದಿಗೆ ಯುದ್ಧ ಮಾಡಬಾರದು. ನೀವು ಹಾಗೆ ಮಾಡಿದ್ದಲ್ಲಿ ನಿಮ್ಮ ಸುತ್ತಲಿರುವ ಹಗ್ಗವು ಇನ್ನೂ ಬಿಗಿಯಾಗುವದು. ನಾನು ಕೇಳಿರುವ ಮಾತುಗಳು ಬದಲಾಗವು. ಯಾಕೆಂದರೆ ಅವು ಸರ್ವಶಕ್ತನಾದ ಯೆಹೋವನ ಮಾತುಗಳು. ಆತನು ಪ್ರಪಂಚವನ್ನು ಆಳುವಾತನು. ಆ ಸಂಗತಿಗಳೆಲ್ಲವೂ ಸಂಭವಿಸುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ, ನಿಮ್ಮ ಬಂಧನಗಳು ಇನ್ನೂ ಬಿಗಿಯಾಗದಂತೆ ಧರ್ಮನಿಂದೆಯನ್ನು ಬಿಡಿರಿ; ಭೂಮಂಡಲದಲ್ಲೆಲ್ಲಾ ನಿಶ್ಚಿತಪ್ರಳಯವಾಗಲಿ ಎಂದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ನುಡಿಯುವುದನ್ನು ಕೇಳಿದ್ದೇನೆ.
Kannada BSI Bible 2016
ಹೀಗಿರುವದರಿಂದ ನಿಮ್ಮ ಬಂಧನಗಳು ಬಿಗಿಯಾಗದಂತೆ ಹಾಸ್ಯಗಾರರಾಗ ಬೇಡಿರಿ; ಸೈನ್ಯಗಳ ಕರ್ತನಾದ ದೇವರ ಕಡೆಯಿಂದ ಭೂಮಂಡಲದಲ್ಲೆಲ್ಲಾ ಸಂಹಾರವು ನಿರ್ಣಯಿಸಿದೆ ಎಂಬದನ್ನು ನಾನು ಕೇಳಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ನಿಮ್ಮ ಬಂಧನಗಳು ಇನ್ನೂ ಬಿಗಿಯಾಗದಂತೆ ಧರ್ಮನಿಂದೆಯನ್ನು ಬಿಡಿರಿ; ಭೂಮಂಡಲದಲ್ಲೆಲ್ಲಾ ನಿಶ್ಚಿತಪ್ರಲಯವಾಗಲಿ ಎಂದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ನುಡಿಯುವದನ್ನು ಕೇಳಿದ್ದೇನೆ.
Kannada Bible (KNCL) BSI 2016
ಆದಕಾರಣ, ನಿಮ್ಮ ಬಂಧನಗಳು ಇನ್ನೂ ಬಿಗಿಯಾಗದಂತೆ ಧರ್ಮನಿಂದೆಯನ್ನು ಬಿಟ್ಟುಬಿಡಿ. ‘ಇಡೀ ನಾಡೇ ನಾಶವಾಗಲಿ’ ಎಂಬ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ತೀರ್ಪನ್ನು ನಾನು ಕೇಳಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗಿರುವುದರಿಂದ ನಿಮ್ಮ ಬಂಧನಗಳು ಬಿಗಿಯಾಗದಂತೆ ಹಾಸ್ಯಗಾರರಾಗಬೇಡಿರಿ. ಸರ್ವಶಕ್ತ ಆಗಿರುವ ಕರ್ತ ಯೆಹೋವ ದೇವರ ಕಡೆಯಿಂದ ಭೂಮಂಡಲದಲ್ಲೆಲ್ಲಾ ಸಂಹಾರ ತರಲು ನಿರ್ಣಯಿಸಿದೆ, ಎಂಬ ತೀರ್ಪನ್ನು ನಾನು ಕೇಳಿದ್ದೇನೆ.