Isaiah 28:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ವ್ಯವಸಾಯಗಾರನು ಜೀರಿಗೆಯನ್ನು ಒಕ್ಕುವದು ಹಲಿವೆಯಿಂದಲ್ಲ, ಕೋಲಿನಿಂದಲೇ. ಜೀರಿಗೆಯನ್ನು ಕುದುರೆಯಿಂದ ಗುಂಡನ್ನು ಉರುಳಿಸಿ ನುಚ್ಚುನೂರು ಮಾಡುವನೋ? ಇಲ್ಲ! ಅವನೊಂದು ಸಣ್ಣ ಕೋಲನ್ನು ಉಪಯೋಗಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ಅವನು ಜೀರಿಗೆಯನ್ನು ಒಕ್ಕುವುದು ಯಂತ್ರದಿಂದಲ್ಲ ಅಥವಾ ಗಾಡಿಯ ಚಕ್ರದಿಂದಲ್ಲ ಆದರೆ ಕೋಲಿನಿಂದಲೇ; ಅಗಸೆಯನ್ನು ಒಕ್ಕುವುದು ಕೋಲಿನಿಂದಲೇ, ಜೀರಿಗೆಯನ್ನು ಒಕ್ಕುವುದು ದೊಣ್ಣೆಯಿಂದಲೇ, ಕಣದ ಗುಂಡಿನಿಂದಲ್ಲ.
Kannada BSI Bible 2016
ಅಗಸೆಯನ್ನು ತುಳಿಯುವ ಯಂತ್ರದಿಂದ ತುಳಿಯುವದಿಲ್ಲ. ಇಲ್ಲವೆ ಜೀರಿಗೆಯ ಮೇಲೆ ಗಾಡಿಯ ಚಕ್ರದಿಂದ (ಕಣದ ಗುಂಡಿನಿಂದ) ತಿರುಗಿಸುವದಿಲ್ಲ. ಆದರೆ ಅಗಸೆಯು ಕೋಲಿನಿಂದಲೂ ಜೀರಿಗೆಯು ದೊಣ್ಣೆಯಿಂದಲೂ ಒಡೆಯಲ್ಪಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ಅವನು ಕರಿಯ ಜೀರಿಗೆಯನ್ನು ಒಕ್ಕುವದು ಹಲಿವೆಯಿಂದಲ್ಲ, ಕೋಲಿನಿಂದಲೇ; ಜೀರಿಗೆಯನ್ನು ಒಕ್ಕುವದು ಕಣದ ಗುಂಡಿನಿಂದಲ್ಲ, ದೊಣ್ಣೆಯಿಂದಲೇ.
Kannada Bible (KNCL) BSI 2016
ಸದಾಪನ್ನು ಒಕ್ಕುವುದು ಕಣದ ಗುಂಡಿನಿಂದಲ್ಲ, ದೊಣ್ಣೆಯಿಂದಲೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಗಸೆಯನ್ನು ತುಳಿಯುವ ಯಂತ್ರದಿಂದ ತುಳಿಯುವುದಿಲ್ಲ. ಜೀರಿಗೆಯನ್ನು ಒಕ್ಕುವುದು ಬಂಡಿಯ ಚಕ್ರ ತಿರುಗಿಸುವುದರಿಂದ ಅಲ್ಲ. ಅಗಸೆಯು ಕೋಲಿನಿಂದಲೂ, ಜೀರಿಗೆಯನ್ನು ಒಕ್ಕುವುದು ದೊಣ್ಣೆಯಿಂದ ಆಗಿರುತ್ತದೆ.