Isaiah 28:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಸಮಯದಲ್ಲಿ ಸರ್ವಶಕ್ತನಾದ ಯೆಹೋವನು “ಮಹಿಮಾಪೂರ್ಣವಾದ ಕಿರೀಟ”ವಾಗುವನು. ಉಳಿದಿರುವ ಆತನ ಜನರಿಗೆ ಆತನು “ಅಂದವಾದ ಪುಷ್ಪಕಿರೀಟ”ವಾಗಿರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದಿನದಲ್ಲಿ ಸೇನಾಧೀಶ್ವರನಾದ ಯೆಹೋವನೇ ತನ್ನ ಜನರಲ್ಲಿ ಉಳಿದವರಿಗೆ ಅಂದದ ಕಿರೀಟವೂ, ಸುಂದರ ಮುಕುಟವೂ ಆಗಿರುವನು.
Kannada BSI Bible 2016
ಆ ದಿನದಲ್ಲಿ ಸೈನ್ಯಗಳ ಕರ್ತನು ತನ್ನ ಜನರಲ್ಲಿ ಉಳಿದವರಿಗೆ ಮಹಿಮೆಯ ಕಿರೀಟವು ಮತ್ತು ಸುಂದರವಾದ ಮುಕಟವೂ ಆಗಿರುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದಿನದಲ್ಲಿ ಸೇನಾಧೀಶ್ವರನಾದ ಯೆಹೋವನೇ ತನ್ನ ಜನರಲ್ಲಿ ಉಳಿದವರಿಗೆ ಅಂದದ ಕಿರೀಟವೂ ಸುಂದರ ಮುಕುಟವೂ ಆಗಿರುವನು;
Kannada Bible (KNCL) BSI 2016
ಆ ದಿನದಂದು ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯೇ ಅಳಿದುಳಿದ ತಮ್ಮ ಜನರಿಗೆ ಅಂದದ ಕಿರೀಟ, ಸುಂದರ ಮುಕುಟವಾಗುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿನದಲ್ಲಿ ಸೇನಾಧೀಶ್ವರ ಯೆಹೋವ ದೇವರು ತನ್ನ ಜನರಲ್ಲಿ ಉಳಿದವರಿಗೆ ಮಹಿಮೆಯ ಕಿರೀಟವೂ ಮತ್ತು ಸುಂದರವಾದ ಮಕುಟವೂ ಆಗಿರುವರು.