Isaiah 28:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆತನ ಜನರನ್ನು ಆಳುವ ನ್ಯಾಯಾಧಿಪತಿಗಳಿಗೆ ಯೆಹೋವನು ಜ್ಞಾನವನ್ನು ಕೊಡುವನು. ಪುರದ್ವಾರದಲ್ಲಿ ಯುದ್ಧಮಾಡುವ ಆತನ ಜನರಿಗೆ ಯೆಹೋವನು ಬಲವನ್ನು ಕೊಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನೇ ನ್ಯಾಯಾಸನದಲ್ಲಿ ಕುಳಿತವನಿಗೆ ನ್ಯಾಯವಿವೇಚನೆಯಾಗಿಯೂ, ಊರಬಾಗಿಲಲ್ಲಿ ಶತ್ರುಗಳನ್ನು ನಾಶಮಾಡುವವರಿಗೆ ಶೌರ್ಯವಾಗಿಯೂ ಪರಿಣಮಿಸುವನು.
Kannada BSI Bible 2016
ನ್ಯಾಯಕ್ಕೋಸ್ಕರ ಕೂತುಕೊಂಡವನಿಗೆ ನ್ಯಾಯದ ಆತ್ಮವೂ ಬಾಗಲಿನ ಕಡೆಗೆ ಯುದ್ಧವನ್ನು ತಿರುಗಿಸುವ ವನಿಗೆ ಪರಾಕ್ರಮವೂ ಆಗಿರುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನೇ ನ್ಯಾಯಾಸನದಲ್ಲಿ ಕುಳಿತವನಿಗೆ ನ್ಯಾಯವಿವೇಚನೆಯಾಗಿಯೂ ಊರಬಾಗಿಲಲ್ಲಿ ಶತ್ರುಗಳನ್ನು ತಳ್ಳಿಬಿಡುವವರಿಗೆ ಶೌರ್ಯವಾಗಿಯೂ ಪರಿಣವಿುಸುವನು.
Kannada Bible (KNCL) BSI 2016
ಅವರು ನ್ಯಾಯಾಸನದಲ್ಲಿ ಕುಳಿತವನಿಗೆ ನ್ಯಾಯವಿವೇಚನೆಯನ್ನೂ ಊರಬಾಗಿಲ ಬಳಿ ಶತ್ರುಗಳನ್ನು ತಡೆಗಟ್ಟುವವರಿಗೆ ಶೌರ್ಯವನ್ನೂ ನೀಡುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನ್ಯಾಯಕ್ಕೋಸ್ಕರ ಕೂತುಕೊಂಡವನಿಗೆ ನ್ಯಾಯದ ಆತ್ಮವೂ, ಬಾಗಿಲಿನ ಕಡೆಗೆ ಯುದ್ಧವನ್ನು ತಿರುಗಿಸುವವನಿಗೆ ಪರಾಕ್ರಮವೂ ಆಗಿರುವನು.