Isaiah 29:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ಹೇಳುವುದೇನೆಂದರೆ, “ಅರೀಯೇಲನ್ನು ನೋಡು. ಅಲ್ಲಿ ದಾವೀದನು ಪಾಳೆಯಮಾಡಿಕೊಂಡಿದ್ದನು. ಆಕೆಯ ಹಬ್ಬಗಳು ಪ್ರತಿ ವರ್ಷವೂ ನಡೆಯುತ್ತಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಯ್ಯೋ, ಅರೀಯೇಲೇ, ಅರೀಯೇಲೇ ದಾವೀದನು ಸೈನ್ಯಸಮೇತವಾಗಿ ವಾಸಿಸಿದ ಪಟ್ಟಣವೇ, ನಿನ್ನ ಗತಿಯನ್ನು ಏನು ಹೇಳಲಿ! ಈ ವರ್ಷಕ್ಕೆ ಮುಂದಿನ ವರ್ಷವನ್ನು ಸೇರಿಸಿರಿ; ಹಬ್ಬಗಳು ಹೆಚ್ಚಾಗಿ ಬರಲಿ.
Kannada BSI Bible 2016
ಅಯ್ಯೋ, ಅರೀಯೇಲೇ, ಅರೀಯೇಲೇ, (ಅಗ್ನಿವೇದಿ) ದಾವೀದನು ವಾಸಿಸಿದ ಪಟ್ಟ ಣವೇ ವರುಷಕ್ಕೆ ವರುಷವನ್ನು ಕೂಡಿಸಿರಿ, ಬಲಿಗಳನ್ನು ವಧಿಸಿ ಅರ್ಪಿಸಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಯ್ಯೋ, ಅರೀಯೇಲೇ, ಅರೀಯೇಲೇ, ದಾವೀದನು ಸೈನ್ಯಸಮೇತನಾಗಿ ವಾಸಿಸಿದ ಪಟ್ಟಣವೇ, ನಿನ್ನ ಗತಿಯನ್ನು ಏನು ಹೇಳಲಿ! ಈ ವರುಷಕ್ಕೆ ಮುಂದಿನ ವರುಷವನ್ನು ಸೇರಿಸಿರಿ; ಹಬ್ಬಗಳು ಸುತ್ತಿಬರಲಿ; ಆಮೇಲೆ ನಾನು ಅರೀಯೇಲನ್ನು ಬಾಧಿಸುವೆನು; ಅರಿಚಾಟ ಕಿರಿಚಾಟವಾಗುವದು;
Kannada Bible (KNCL) BSI 2016
ಅರೀಯೇಲೇ, ಅರೀಯೇಲೇ, ದಾವೀದನು ದಂಡಿಳಿದ ಪಟ್ಟಣವೇ, ನಿನಗೆ ಧಿಕ್ಕಾರ! ಒಂದೆರಡು ವರ್ಷ ತುಂಬಲಿ. ಹಬ್ಬಹುಣ್ಣಿಮೆಗಳು ಕಳೆಯಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಯ್ಯೋ, ಅರೀಯೇಲೇ, ಅರೀಯೇಲೇ, ದಾವೀದನು ವಾಸಿಸಿದ ಪಟ್ಟಣವೇ! ವರುಷಕ್ಕೆ ವರುಷವನ್ನು ಕೂಡಿಸಿರಿ. ನಿಮ್ಮ ಹಬ್ಬಗಳ ಚಕ್ರ ಮುಂದುವರಿಯಲಿ.