Isaiah 29:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ನಿಮಗೆ ತೂಕಡಿಕೆ ಬರಮಾಡುವನು. ಆತನು ನಿಮ್ಮ ಕಣ್ಣುಗಳನ್ನು ಮುಚ್ಚುವನು. (ಪ್ರವಾದಿಗಳು ನಿಮ್ಮ ಕಣ್ಣುಗಳಾಗಿದ್ದಾರೆ.) ಯೆಹೋವನು ನಿಮ್ಮ ತಲೆಗಳನ್ನು ಮುಚ್ಚುವನು. (ಪ್ರವಾದಿಗಳು ನಿಮ್ಮ ತಲೆಗಳಾಗಿದ್ದಾರೆ.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ, ಪ್ರವಾದಿಗಳ ಕಣ್ಣುಗಳನ್ನು ಮುಚ್ಚಿ, ದಿವ್ಯದರ್ಶಿಗಳ ತಲೆಗಳಿಗೆ ಮುಸುಕು ಹಾಕಿದ್ದಾನೆ.
Kannada BSI Bible 2016
ಕರ್ತನು ನಿಮ್ಮ ಮೇಲೆ ಗಾಢ ನಿದ್ರೆಯ ಆತ್ಮವನ್ನು ಹೊಯಿದು ನಿಮ್ಮ ಕಣ್ಣುಗಳನ್ನು ಮುಚ್ಚಿದ್ದಾನೆ; ಪ್ರವಾದಿಗಳನ್ನೂ ನಿಮ್ಮ ಮುಖ್ಯಸ್ಥರಾದ ದರ್ಶಿಗಳನ್ನೂ ಮುಚ್ಚಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ ಪ್ರವಾದಿಗಳೆಂಬ ಕಣ್ಣುಗಳನ್ನು ಮುಚ್ಚಿ ದಿವ್ಯದರ್ಶಿಗಳೆಂಬ ತಲೆಗಳಿಗೆ ಮುಸುಕು ಹಾಕಿದ್ದಾನಷ್ಟೆ.
Kannada Bible (KNCL) BSI 2016
ಸರ್ವೇಶ್ವರ ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ ಪ್ರವಾದಿಗಳೆಂಬ ಕಣ್ಣುಗಳನ್ನು ಕಟ್ಟಿಬಿಟ್ಟಿದ್ದಾರೆ. ದಿವ್ಯದರ್ಶನಗಳೆಂಬ ಕಲೆಗಳಿಗೆ ಮುಸುಕು ಹಾಕಿಬಿಟ್ಟಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ನಿಮ್ಮ ಮೇಲೆ ಗಾಢನಿದ್ರೆಯ ಆತ್ಮವನ್ನು ಹೊಯ್ದು, ನಿಮ್ಮ ಕಣ್ಣುಗಳನ್ನು ಮುಚ್ಚಿದ್ದಾರೆ. ಪ್ರವಾದಿಗಳನ್ನೂ, ನಿಮ್ಮ ಮುಖ್ಯಸ್ಥರಾದ ದರ್ಶಿಗಳನ್ನು ಮುಚ್ಚಿದ್ದಾರೆ.