Isaiah 29:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಒಡೆಯನು ಹೇಳುವುದೇನೆಂದರೆ, “ನನ್ನನ್ನು ಪ್ರೀತಿಸುವದಾಗಿ ಇವರು ಹೇಳುತ್ತಾರೆ. ಅವರು ತಮ್ಮ ಮಾತುಗಳಿಂದ ನನ್ನನ್ನು ಗೌರವಿಸುತ್ತಾರೆ. ಆದರೆ ಅವರ ಹೃದಯಗಳು ನನ್ನಿಂದ ದೂರವಾಗಿವೆ. ಅವರು ನನಗೆ ತೋರಿಸುವ ಗೌರವವು ಅವರು ಬಾಯಿಪಾಠ ಮಾಡಿದ ಮಾನವ ನಿರ್ಮಿತವಾದ ನಿಯಮಗಳಾಗಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಹೇಳುವುದೇನೆಂದರೆ, “ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ, ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು, ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.
Kannada BSI Bible 2016
ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಈ ಜನರು ಬಾಯಿಂದ ನನ್ನನ್ನು ಸವಿಾಪಿಸಿ; ಅವರ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ತಮ್ಮ ಹೃದಯವನ್ನು ನನಗೆ ದೂರ ಮಾಡಿಕೊಂಡು ಬಾಯಿ ಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಯೆಹೋವನು - ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ;
Kannada Bible (KNCL) BSI 2016
ಸರ್ವೇಶ್ವರ ಹೀಗೆಂದರು: “ಈ ಜನರು ನನ್ನನ್ನು ಸಮೀಪಿಸುವುದು ಬರೀ ಮಾತಿನ ಮರ್ಯಾದೆಯಿಂದ, ಇವರು ನನ್ನನ್ನು ಸನ್ಮಾನಿಸುವುದು ಬರೀ ಮಾತಿನ ಮಾಲೆಯಿಂದ, ಇವರ ಹೃದಯವಾದರೋ ಬಲು ದೂರವಿದೆ ನನ್ನಿಂದ, ಇವರು ನನಗೆ ಸಲ್ಲಿಸುವ ಭಕ್ತಿ ಕೂಡಿದೆ ಕೇವಲ ಭಯದಿಂದ, ಕಲಿತಿಹರಿವರು ಮಾನವಕಲ್ಪಿತ ಕಟ್ಟಳೆಯನು ಬಾಯಿಪಾಠದಿಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕರ್ತರು ಹೇಳುವುದೇನೆಂದರೆ: “ಈ ಜನರು ಬಾಯಿಂದ ನನ್ನನ್ನು ಸಮೀಪಿಸಿ, ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ, ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ. ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.