Isaiah 29:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಅದ್ಭುತಕಾರ್ಯಗಳಿಂದ ಅವರನ್ನು ಆಶ್ಚರ್ಯಗೊಳಿಸುತ್ತಾ ಇರುವೆನು. ಅವರ ಜ್ಞಾನಿಗಳು ತಮ್ಮ ಜ್ಞಾನವನ್ನು ಕಳೆದುಕೊಳ್ಳುವರು. ಅವರು ಅರ್ಥಮಾಡಿಕೊಳ್ಳಲಾರರು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರುವುದರಿಂದ ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ, ಅದ್ಭುತವೂ ಆದ ಕಾರ್ಯವನ್ನು ಇನ್ನು ಮಾಡುವೆನು; ಇವರ ಜ್ಞಾನಿಗಳ ಜ್ಞಾನವು ಅಳಿಯುವುದು, ವಿವೇಕಿಗಳ ವಿವೇಕವು ಅಡಗುವುದು” ಎಂದು ಹೇಳಿದನು.
Kannada BSI Bible 2016
ಹೀಗಿರುವದ ರಿಂದ ಇಗೋ, ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ ಅದ್ಭುತವೂ ಆದ ಕಾರ್ಯವನ್ನು ಮಾಡು ವೆನು; ಅವರ ಜ್ಞಾನಿಗಳ ಜ್ಞಾನವು ಅಳಿಯುವದು (ನಾಶ), ಅವರ ವಿವೇಕಿಗಳ ತಿಳುವಳಿಕೆಯು ಅಡಗಿ ಕೊಳ್ಳುವದು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರುವದರಿಂದ ನಾನು ಈ ಜನರ ಮಧ್ಯದಲ್ಲಿ ಅಧಿಕಾಶ್ಚರ್ಯವೂ ಅದ್ಭುತವೂ ಆದ ಕಾರ್ಯವನ್ನು ಇನ್ನು ಮಾಡುವೆನು; ಇವರ ಜ್ಞಾನಿಗಳ ಜ್ಞಾನವು ಅಳಿಯುವದು, ವಿವೇಕಿಗಳ ವಿವೇಕವು ಅಡಗುವದು ಎಂದು ಹೇಳಿದನು.
Kannada Bible (KNCL) BSI 2016
ಇಂತಿರಲು ಇವರ ಮಧ್ಯೆ ಎಸಗುವೆನು ಅಧಿಕಾಶ್ಚರ್ಯವಾದ ಅದ್ಭುತಕಾರ್ಯಗಳನು, ಅಳಿವುದು ಇವರ ಜ್ಞಾನಿಗಳ ಜ್ಞಾನವು, ಅಡಗುವುದು ವಿವೇಕಿಗಳ ವಿವೇಕವು\.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗಿರುವುದರಿಂದ, ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ ಅದ್ಭುತವೂ ಆದ ಕಾರ್ಯವನ್ನು ಇನ್ನೂ ಮಾಡುವೆನು. ಅವರ ಜ್ಞಾನಿಗಳ ಜ್ಞಾನವು ಅಳಿಯುವುದು. ಅವರ ವಿವೇಕಿಗಳ ವಿವೇಕವು ಅಡಗಿಕೊಳ್ಳುವುದು.”