Isaiah 29:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನಿಗೆ ತಮ್ಮ ಆಲೋಚನೆಗಳು ತಿಳಿಯಬಾರದೆಂದು ಕುತಂತ್ರೋಪಾಯಗಳನ್ನು ಮಾಡಿ, ಕತ್ತಲೆಯಲ್ಲಿ ದುಷ್ಕೃತ್ಯಗಳನ್ನು ಮಾಡುತ್ತಾ, “ನಮ್ಮನ್ನು ಯಾರು ನೋಡಬಲ್ಲರು, ನಮ್ಮನ್ನು ಯಾರು ಗುರುತಿಸಬಲ್ಲರು?” ಎಂದುಕೊಳ್ಳುವವರ ಗತಿಯನ್ನು ಏನು ಹೇಳಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಮ್ಮ ಆಲೋಚನೆಯನ್ನು ಯೆಹೋವನಿಗೆ ಮರೆಮಾಡುವುದಕ್ಕೆ, ಅಗಾಧಕ್ಕೆ ಹೋಗಿ, “ನಮ್ಮನ್ನು ಯಾರು ನೋಡುವರು? ಯಾರು ತಿಳಿದಾರು?” ಅಂದುಕೊಂಡು ಕತ್ತಲಲ್ಲೇ ತಮ್ಮ ಕೆಲಸಗಳನ್ನು ನಡೆಸುವವರ ಗತಿಯನ್ನು ಏನು ಹೇಳಲಿ!
Kannada BSI Bible 2016
ತಮ್ಮ ಆಲೋಚನೆಯನ್ನು ಕರ್ತನಿಗೆ ಮರೆಮಾಜುವದಕ್ಕೆ ಅಗಾಧದಲ್ಲಿ ಮಾಡಿ--ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ತಿಳಿದಾರು ಅಂದುಕೊಂಡು ಕತ್ತಲೆಯಲ್ಲೇ ತಮ್ಮ ಕೆಲಸವನ್ನು ನಡಿಸು ವವರಿಗೆ ಅಯ್ಯೋ!
Kannada BSI JV (ಕನ್ನಡ ಸತ್ಯವೇದವು J.V. (BSI))
ತಮ್ಮ ಆಲೋಚನೆಯನ್ನು ಯೆಹೋವನಿಗೆ ಮರೆಮಾಜುವದಕ್ಕೆ ಅಗಾಧೋಪಾಯ ಮಾಡಿ ನಮ್ಮನ್ನು ಯಾರು ನೋಡಿಯಾರು, ಯಾರು ತಿಳಿದಾರು ಅಂದುಕೊಂಡು ಕತ್ತಲಲ್ಲೇ ತಮ್ಮ ಕೆಲಸಗಳನ್ನು ನಡಿಸುವವರ ಗತಿಯನ್ನು ಏನು ಹೇಳಲಿ!
Kannada Bible (KNCL) BSI 2016
ತಮ್ಮ ಆಲೋಚನೆಯನ್ನು ಸರ್ವೇಶ್ವರ ಸ್ವಾಮಿಯಿಂದ ಬಚ್ಚಿಡುವುದಕ್ಕಾಗಿ ಒಳಸಂಚುಮಾಡುವವರಿಗೆ ಧಿಕ್ಕಾರ! ಇವರು, “ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ಗಮನಿಸಿಯಾರು?” ಎಂದುಕೊಂಡು ಕತ್ತಲಲ್ಲೇ ತಮ್ಮ ಕೃತ್ಯಗಳನ್ನು ನಡೆಸುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಮ್ಮ ಆಲೋಚನೆಗಳನ್ನು ಯೆಹೋವ ದೇವರಿಗೆ ಮರೆಮಾಡುವುದಕ್ಕೆ ಅಗಾಧದಲ್ಲಿ ಹೋಗಿ, ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ತಿಳಿದಾರು? ಎಂದುಕೊಂಡು, ಕತ್ತಲೆಯಲ್ಲೇ ತಮ್ಮ ಕೆಲಸವನ್ನು ನಡಿಸುವವರಿಗೆ ಕಷ್ಟ!