Isaiah 29:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪುಸ್ತಕದಲ್ಲಿರುವ ಮಾತುಗಳನ್ನು ಕಿವುಡನು ಕೇಳಿಸಿಕೊಳ್ಳುವನು. ಕುರುಡನು ಕತ್ತಲೆಯಲ್ಲಿಯೂ ಮಂಜು ತುಂಬಿದ್ದಾಗಲೂ ನೋಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದಿನದಲ್ಲಿ ಕಿವುಡರು ಶಾಸ್ತ್ರದ ಮಾತುಗಳನ್ನು ಕೇಳುವರು ಮತ್ತು ಕುರುಡರ ಕಣ್ಣುಗಳು ಕತ್ತಲೆಯೊಳಗೂ ಕಾಣುವುದು.
Kannada BSI Bible 2016
ಆ ದಿನದಲ್ಲಿ ಕಿವುಡರು ಪುಸ್ತಕದ ಮಾತುಗಳನ್ನು ಕೇಳುವರು ಕುರುಡರ ಕಣ್ಣುಗಳು ಕತ್ತಲೆಯೊಳಗಿಂದಲೂ ಅಂಧಕಾರದೊಳಗಿಂದಲೂ ನೋಡುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದಿನದಲ್ಲಿ ಕಿವುಡರು ಶಾಸ್ತ್ರದ ಮಾತುಗಳನ್ನು ಕೇಳುವರು, ಮೊಬ್ಬುಕತ್ತಲುಗಳಲ್ಲಿಯೂ ಕುರುಡರ ಕಣ್ಣು ಕಾಣುವದು.
Kannada Bible (KNCL) BSI 2016
ಆ ದಿನದಂದು ಕಿವುಡರು ಗ್ರಂಥವಾಕ್ಯಗಳನ್ನು ಓದುವುದನ್ನು ಕೇಳುವರು. ಕುರುಡರಿಗೆ ಮಬ್ಬಿನಲ್ಲೂ ಕತ್ತಲಲ್ಲೂ ಕಣ್ಣು ಕಾಣಿಸುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿನದಲ್ಲಿ ಕಿವುಡರು ಗ್ರಂಥದ ಮಾತುಗಳನ್ನು ಕೇಳುವರು ಮತ್ತು ಕುರುಡರ ಕಣ್ಣುಗಳು ಕತ್ತಲೆಯೊಳಗಿಂದಲೂ, ಅಂಧಕಾರದೊಳಗಿಂದಲೂ ಕಾಣುವುವು.