Isaiah 29:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
(ಅವರು ನೀತಿವಂತರ ವಿಷಯವಾಗಿ ಸುಳ್ಳಾಡುವರು. ನ್ಯಾಯಾಲಯದಲ್ಲಿ ಜನರನ್ನು ಸಿಕ್ಕಿಸಿ ಹಾಕುವರು. ದೀನರನ್ನು ನಾಶಮಾಡಲು ಅವರು ಪ್ರಯತ್ನಿಸುವರು.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸುಳ್ಳುಸಾಕ್ಷಿಯಿಂದ ತಪ್ಪು ಹೊರಿಸುವವರೂ, ಚಾವಡಿಯಲ್ಲಿ ದೋಷವನ್ನು ಖಂಡಿಸುವವನಿಗೆ ಉರುಲೊಡ್ಡುವವರೂ, ನ್ಯಾಯವಂತನ ನ್ಯಾಯವನ್ನು ಸುಮ್ಮನೆ ತಪ್ಪಿಸುವವರೂ ಆಗಿರುವ ಅಧರ್ಮನಿರತರೆಲ್ಲರೂ ನಿರ್ಮೂಲವಾಗುವರು.
Kannada BSI Bible 2016
ಒಂದು ಮಾತಿನ ನಿಮಿತ್ತ ಮನುಷ್ಯರಿಗೆ ತಪ್ಪು ಹೊರಿಸುವವರೂ ಬಾಗಲಲ್ಲಿ ವಾದಿಸುವವನಿಗೆ ಉರ್ಲು ಒಡ್ಡುವವರೂ ಏನೂ ಇಲ್ಲದೆ ಕಾರ್ಯಕ್ಕೆ ನೀತಿವಂತನನ್ನು ತಿರುಗಿಸುವವರೂ ನಿರ್ನಾಮವಾಗುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಪಸಾಕ್ಷಿಯಿಂದ ತಪ್ಪು ಹೊರಿಸುವವರೂ ಚಾವಡಿಯಲ್ಲಿ ದೋಷವನ್ನು ಖಂಡಿಸುವವನಿಗೆ ಉರುಲೊಡ್ಡುವವರೂ ನ್ಯಾಯವಂತನ ನ್ಯಾಯವನ್ನು ಸುಮ್ಮಸುಮ್ಮನೆ ತಪ್ಪಿಸುವವರೂ ಆಗಿರುವ ಅಧರ್ಮನಿರತರೆಲ್ಲಾ ನಿರ್ಮೂಲರಾಗುವರು.
Kannada Bible (KNCL) BSI 2016
ಸುಳ್ಳುಸಾಕ್ಷಿ ಹೇಳಿ ತಪ್ಪುಹೊರಿಸುವವರು, ನ್ಯಾಯಸ್ಥಾನದಲ್ಲಿ ದೋಷವನ್ನು ಖಂಡಿಸುವವರಿಗೆ ಉರುಲೊಡ್ಡುವರು, ನೀತಿವಂತನಿಗೆ ನ್ಯಾಯ ತಪ್ಪಿಸುವವರು - ಹೀಗೆ ಅಧರ್ಮದಲ್ಲಿ ನಿರತರಾಗಿರುವ ಇವರೆಲ್ಲರು ನಿರ್ಮೂಲರಾಗುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸುಳ್ಳುಸಾಕ್ಷಿ ಹೇಳಿ ತಪ್ಪುಹೊರಿಸುವವರು, ನ್ಯಾಯಸ್ಥಾನದಲ್ಲಿ ದೋಷವನ್ನು ಖಂಡಿಸುವವರಿಗೆ ಉರುಲೊಡ್ಡುವವರು, ನೀತಿವಂತನಿಗೆ ನ್ಯಾಯ ತಪ್ಪಿಸುವವರು ಹೀಗೆ ಅಧರ್ಮದಲ್ಲಿ ನಿರತರಾಗಿರುವ ಇವರೆಲ್ಲರು ನಿರ್ಮೂಲರಾಗುವರು.