Isaiah 29:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಯಾಕೋಬನ ವಂಶಕ್ಕೆ ಹೀಗೆನ್ನುತ್ತಾನೆ: (ಅಬ್ರಹಾಮನನ್ನು ಬಿಡಿಸಿದ ಯೆಹೋವನೇ ನಾನು.) “ಈಗ ಯಾಕೋಬಿನ ಜನರು ನಾಚಿಕೆಪಡುವದಿಲ್ಲ ಮತ್ತು ಅವಮಾನ ಹೊಂದುವದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲು ಅಬ್ರಹಾಮನನ್ನು ಉದ್ಧರಿಸಿದ ಯೆಹೋವನು ಯಾಕೋಬನ ಮನೆತನದ ವಿಷಯವಾಗಿ, “ಯಾಕೋಬ್ಯರು, ಇನ್ನು ನಾಚಿಕೆಪಡುವುದಿಲ್ಲ, ಅವರ ಮುಖವು ಇನ್ನು ಕಳೆಗುಂದುವುದಿಲ್ಲ.
Kannada BSI Bible 2016
ಆದದರಿಂದ ಅಬ್ರಹಾಮನನ್ನು ವಿಮೋಚಿಸಿದ ಕರ್ತನು ಯಾಕೋಬನ ಮನೆತನದ ವಿಷಯವಾಗಿ ಹೇಳುವದೇನಂದರೆ--ಈಗ ಯಾಕೋಬ್ಯರು ನಾಚಿಕೆ ಪಡುವದಿಲ್ಲ ಇಲ್ಲವೆ ಅವನ ಮುಖವು ಕಳೆಗುಂದು ವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ಅಬ್ರಹಾಮನನ್ನು ಉದ್ಧರಿಸಿದ ಯೆಹೋವನು ಯಾಕೋಬನ ಮನೆತನದ ವಿಷಯವಾಗಿ - ಯಾಕೋಬ್ಯರು ಇನ್ನು ನಾಚಿಕೆಗೆ ಈಡಾಗರು, ಅವರ ಮುಖವು ಇನ್ನು ಬಾಡದು,
Kannada Bible (KNCL) BSI 2016
ಹೀಗಿರಲು ಅಬ್ರಹಾಮನನ್ನು ಉದ್ಧರಿಸಿದ ಸರ್ವೇಶ್ವರ ಸ್ವಾಮಿ ಯಕೋಬನ ಮನೆತನದ ವಿಷಯವಾಗಿ ಹೀಗೆನ್ನುತ್ತಾರೆ: “ಯಕೋಬ ವಂಶದವರೇ, ಇನ್ನು ಮೇಲೆ ನೀವು ನಾಚಿಕೆಗೀಡಾಗುವುದಿಲ್ಲ, ನಿಮ್ಮ ಮುಖ ಇನ್ನು ಬಾಡುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಅಬ್ರಹಾಮನನ್ನು ವಿಮೋಚಿಸಿದ ಯೆಹೋವ ದೇವರು ಯಾಕೋಬಿನ ಮನೆತನದ ವಿಷಯವಾಗಿ ಹೇಳುವುದೇನೆಂದರೆ, “ಈಗ ಯಾಕೋಬ್ಯರು ನಾಚಿಕೆಪಡುವುದಿಲ್ಲ. ಅವನ ಮುಖವು ಕಳೆಗುಂದುವುದಿಲ್ಲ.