Isaiah 29:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೆಲದ ಮೇಲೆ ಅನೇಕ ಅಪರಿಚಿತರು ಧೂಳಿನ ಕಣಗಳಂತೆ ಇದ್ದಾರೆ. ಅನೇಕ ಮಂದಿ ದುಷ್ಟಜನರು ಗಾಳಿಯಲ್ಲಿ ತೂರಿಹೋಗುವ ಹೊಟ್ಟಿನಂತಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗುಂಪು ಗುಂಪಾಗಿ ಕೂಡಿರುವ ನಿನ್ನ ಶತ್ರುಗಳು ಸೂಕ್ಷ್ಮವಾದ ಧೂಳಿನಂತೆಯೂ, ಭಯಂಕರವಾದ ಸಮೂಹವು ಹಾರಿಹೋಗುವ ಹೊಟ್ಟಿನಂತೆಯೂ ಇರುವರು; ಅವರು ಕ್ಷಣ ಮಾತ್ರದಲ್ಲಿ ಲಯಹೊಂದುವರು.
Kannada BSI Bible 2016
ಅದೂ ಅಲ್ಲದೆ ನಿನ್ನ ಅನ್ಯರ ಗುಂಪು ಸೂಕ್ಷ್ಮ ವಾದ ದೂಳಿನಂತಾಗುವದು, ಭಯಂಕರವಾದ ಸಮೂಹವು ಹಾರಿಹೋಗುವ ಹೊಟ್ಟಿನ ಹಾಗೆ ಇರು ವದು; ಹೌದು, ಅದು ಕ್ಷಣ ಮಾತ್ರದಲ್ಲಿ ಫಕ್ಕನೆ ಆಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗುಂಪುಗುಂಪಾಗಿ ಕೂಡಿರುವ ನಿನ್ನ ಶತ್ರುಗಳು ಸೂಕ್ಷ್ಮ ದೂಳಿಯಂತೆಯೂ ತಂಡೋಪತಂಡವಾಗಿ ಬಂದಿರುವ ಭಯಂಕರರು ಹಾರಿಹೋಗುವ ಹೊಟ್ಟಿನ ಹಾಗೂ ಆಗುವರು; ತಟ್ಟನೆ ಕ್ಷಣದಲ್ಲಿ ಲಯಹೊಂದುವರು.
Kannada Bible (KNCL) BSI 2016
ಅರೀಯೇಲೇ, ಗುಂಪುಗುಂಪಾಗಿ ಕೂಡಿಬರುವ ನಿನ್ನ ಶತ್ರುಗಳು ಧೂಳಿಪುಡಿಯಂತೆ ತೂರಿಹೋಗುವರು. ತಂಡೋಪತಂಡವಾಗಿ ಬಂದಿರುವ ಭಯಂಕರ ಸೈನಿಕರು ಹೊಟ್ಟಿನಂತೆ ಹಾರಿಹೋಗುವರು. ತಟ್ಟನೆ ಕ್ಷಣಮಾತ್ರದಲ್ಲಿ ಕಣ್ಮರೆಯಾಗುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದೂ ಅಲ್ಲದೆ ನಿನ್ನ ವೈರಿಗಳ ಗುಂಪು ಸೂಕ್ಷ್ಮವಾದ ಧೂಳಿನಂತಾಗುವುದು. ಭಯಂಕರವಾದ ಸಮೂಹವು ಹಾರಿಹೋಗುವ ಹೊಟ್ಟಿನ ಹಾಗೆ ಇರುವುದು. ಹೌದು, ಅದು ಕ್ಷಣಮಾತ್ರದಲ್ಲಿ ಫಕ್ಕನೆ ಆಗುವುದು.