Isaiah 29:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸರ್ವಶಕ್ತನಾದ ಯೆಹೋವನು ನಿಮ್ಮನ್ನು ಗುಡುಗು, ಮಹಾಶಬ್ದ, ಬಿರುಗಾಳಿ, ಚಂಡಮಾರುತ, ದಹಿಸುವ ಅಗ್ನಿಜ್ವಾಲೆ ಇವುಗಳಿಂದ ಶಿಕ್ಷಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೇನಾಧೀಶ್ವರನಾದ ಯೆಹೋವನು ಗುಡುಗು, ಭೂಕಂಪ, ಮಹಾಶಬ್ದ, ಬಿರುಗಾಳಿ, ಚಂಡಮಾರುತ, ದಹಿಸುವ ಅಗ್ನಿಯ ಜ್ವಾಲೆ ಇವುಗಳ ಮೂಲಕ ನಿನ್ನನ್ನು ಶಿಕ್ಷಿಸುವನು.
Kannada BSI Bible 2016
ಸೈನ್ಯಗಳ ಕರ್ತನ ಕಡೆಯಿಂದಲೇ ನೀನು ಗುಡುಗಿನಿಂದಲೂ ಮಹಾಶಬ್ದದಿಂದಲೂ ಬಿರುಗಾಳಿ, ಸುಳಿಗಾಳಿಯಿಂದಲೂ ದಹಿಸುವ ಅಗ್ನಿಜ್ವಾಲೆಯಿಂದ ಲೂ ವಿಚಾರಿಸಲ್ಪಡುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೇನಾಧೀಶ್ವರನಾದ ಯೆಹೋವನು ಗುಡುಗು, ಭೂಕಂಪ, ಮಹಾಶಬ್ದ, ಬಿರುಗಾಳಿ, ಚಂಡಮಾರುತ, ದಹಿಸುವ ಅಗ್ನಿಯ ಜ್ವಾಲೆ ಇವುಗಳ ಮೂಲಕ ಆ ನಗರಿಯನ್ನು ರಕ್ಷಿಸುವನು.
Kannada Bible (KNCL) BSI 2016
ಗುಡುಗು, ಭೂಕಂಪ, ಮಹಾಗರ್ಜನೆ, ಬಿರುಗಾಳಿ, ಚಂಡಮಾರುತ, ಭಸ್ಮಮಾಡುವಂಥ ಅಗ್ನಿಜ್ವಾಲೆ - ಇವುಗಳ ಮೂಲಕ ಸರ್ವೇಶ್ವರ ನಿನ್ನ ಪರವಾಗಿ ಪ್ರತ್ಯಕ್ಷವಾಗುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೇನಾಧೀಶ್ವರ ಯೆಹೋವ ದೇವರು ಗುಡುಗಿನಿಂದಲೂ, ಮಹಾಶಬ್ದದಿಂದಲೂ, ಬಿರುಗಾಳಿ ಸುಳಿಗಾಳಿಯಿಂದಲೂ, ದಹಿಸುವ ಅಗ್ನಿಜ್ವಾಲೆಯಿಂದಲೂ ಪ್ರತ್ಯಕ್ಷರಾಗುವರು.