Isaiah 29:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಶ್ಚರ್ಯಪಡಿರಿ! ಬೆರಗಾಗಿರಿ! ನೀವು ಮತ್ತರಾಗಿರುವಿರಿ! ಆದರೆ ದ್ರಾಕ್ಷಾರಸದಿಂದಲ್ಲ. ನೋಡಿ, ಆಶ್ಚರ್ಯಪಡಿರಿ! ನೀವು ಮುಗ್ಗರಿಸಿಬೀಳುವಿರಿ, ಆದರೆ ಮದ್ಯಪಾನದಿಂದಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮನ್ನು ನೀವೇ ಬೆರಗು ಮಾಡಿಕೊಂಡು ಬೆರಗಾಗಿರಿ, ಕುರುಡು ಮಾಡಿಕೊಂಡು ಕುರುಡರಾಗಿರಿ! ಇವರು ಅಮಲೇರಿದ್ದಾರೆ, ದ್ರಾಕ್ಷಾರಸದಿಂದಲ್ಲ; ಓಲಾಡುತ್ತಾರೆ ಮದ್ಯದಿಂದಲ್ಲ.
Kannada BSI Bible 2016
ತಾಮಸಮಾಡಿ ಆಶ್ಚರ್ಯಪಡಿರಿ, ನೀವು ಕೂಗಿರಿ, ಕೂಗಾಡಿರಿ ಇವರು ಅಮಲೇರಿದ್ದಾರೆ; ಆದರೆ ದ್ರಾಕ್ಷಾ ರಸದಿಂದಲ್ಲ; ಅವರು ಕೂಗಾಡುತ್ತಾರೆ, ಆದರೆ ಮದ್ಯ ದಿಂದಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮನ್ನು ನೀವೇ ಬೆರಗುಮಾಡಿಕೊಂಡು ಬೆರಗಾಗಿರಿ, ಕುರುಡುಮಾಡಿಕೊಂಡು ಕುರುಡರಾಗಿರಿ; ಇವರು ಅಮಲೇರಿದ್ದಾರೆ, ದ್ರಾಕ್ಷಾರಸದಿಂದಲ್ಲ; ಓಲಾಡುತ್ತಾರೆ, ಮದ್ಯದಿಂದಲ್ಲ.
Kannada Bible (KNCL) BSI 2016
ನಿಮ್ಮನ್ನು ನೀವೇ ಬೆರಗುಮಾಡಿಕೊಂಡು ನಿಬ್ಬೆರಗಾಗಿರಿ. ಕುರುಡು ಮಾಡಿಕೊಂಡು ಕಡುಕುರುಡರಾಗಿರಿ. ಮದ್ಯಪಾನ ಮಾಡದೆಯೇ ಮತ್ತರಾಗಿರಿ, ಕುಡಿಯದೆಯೇ ಓಲಾಡಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಾಮಸ ಮಾಡಿ ಆಶ್ಚರ್ಯಪಡಿರಿ. ಕುರುಡು ಮಾಡಿಕೊಂಡು ದೃಷ್ಟಿಯಿಲ್ಲದವರಾಗಿರಿ ಇವರು ಅಮಲೇರಿದ್ದಾರೆ. ಆದರೆ ದ್ರಾಕ್ಷಾರಸದಿಂದಲ್ಲ. ಅವರು ಕೂಗಾಡುತ್ತಾರೆ, ಆದರೆ ಮದ್ಯದಿಂದಲ್ಲ.