Isaiah 3:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮಕ್ಕಳು ನನ್ನ ಜನರನ್ನು ಸೋಲಿಸಿಬಿಡುವರು. ಸ್ತ್ರೀಯರು ನನ್ನ ಜನರನ್ನು ಆಳುವರು. ನನ್ನ ಜನರೇ, ನಿಮ್ಮ ಮಾರ್ಗದರ್ಶಕರು ನಿಮ್ಮನ್ನು ತಪ್ಪುದಾರಿಯಲ್ಲಿ ನಡಿಸುವರು; ಸರಿಯಾದ ದಾರಿಯಿಂದ ನಿಮ್ಮನ್ನು ಅಡ್ಡದಾರಿಗೆ ನಡಿಸುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಪ್ರಜೆಗಳನ್ನು ಬಾಲಕರು ಬಾಧಿಸುವರು. ಸ್ತ್ರೀಯರು ಅವರನ್ನು ಆಳುವರು. ನನ್ನ ಪ್ರಜೆಗಳೇ, ನಿಮ್ಮನ್ನು ನಡೆಸುವವರು ದಾರಿತಪ್ಪಿಸುವವರಾಗಿದ್ದಾರೆ. ನೀವು ನಡೆಯತಕ್ಕ ದಾರಿಯನ್ನು ಹಾಳುಮಾಡಿದ್ದಾರೆ.
Kannada BSI Bible 2016
ನನ್ನ ಪ್ರಜೆಗಳನ್ನೋ ಹುಡುಗರು ಅವರನ್ನು ಭಾಧಿಸುವರು, ಅವರನ್ನು ಆಳುವವರು ಹೆಂಗಸರು. ಓ ನನ್ನ ಪ್ರಜೆಗಳೇ, ನಿಮ್ಮನ್ನು ನಡಿಸು ವವರು ದಾರಿತಪ್ಪಿಸುವವರಾಗಿದ್ದಾರೆ. ನೀವು ನಡೆ ಯುವ ದಾರಿಯನ್ನು ಹಾಳುಮಾಡಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಜನರನ್ನೋ ಬಾಧಿಸುವವರು ಹುಡುಗರು, ಆಳುವವರು ಹೆಂಗಸರು. ನನ್ನ ಜನರೇ! ನಿಮ್ಮನ್ನು ನಡಿಸುವವರು ದಾರಿತಪ್ಪಿಸುವವರಾಗಿದ್ದಾರೆ, ನೀವು ನಡೆಯತಕ್ಕ ದಾರಿಯನ್ನು ಅಳಿಸಿಬಿಟ್ಟಿದ್ದಾರೆ.
Kannada Bible (KNCL) BSI 2016
ನನ್ನ ಜನರನ್ನೋ ಬಾಧಿಸುತ್ತಿರುವವರು ಹುಡುಗರು; ಆಳುತ್ತಿರುವವರೋ ಹೆಂಗಳೆಯರು. ಎಲೈ ನನ್ನ ಜನರೇ, ನಿಮ್ಮ ನಾಯಕರು ನಿಮ್ಮನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ. ನಿಮ್ಮ ಮಾರ್ಗವನ್ನು ವಕ್ರಗೊಳಿಸುತ್ತಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಪ್ರಜೆಗಳನ್ನು ಹುಡುಗರು ಬಾಧಿಸುವರು. ಸ್ತ್ರೀಯರು ಅವರನ್ನು ಆಳುವರು. ನನ್ನ ಪ್ರಜೆಗಳೇ, ನಿಮ್ಮನ್ನು ನಡೆಸುವವರು ದಾರಿ ತಪ್ಪಿಸುವವರಾಗಿದ್ದಾರೆ. ನೀವು ನಡೆಯುವ ದಾರಿಯನ್ನು ಹಾಳು ಮಾಡಿದ್ದಾರೆ.