Isaiah 3:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾಯಕರಿಗೂ ಹಿರಿಯರಿಗೂ ಅವರು ಮಾಡಿದ ಕಾರ್ಯಗಳ ವಿರುದ್ಧವಾಗಿ ಆತನು ನ್ಯಾಯತೀರಿಸುವನು. ಯೆಹೋವನು ಹೇಳುವುದೇನೆಂದರೆ, “ನೀವು ದಾಕ್ಷಾತೋಟವನ್ನು (ಯೆಹೂದವನ್ನು) ಸುಟ್ಟುಹಾಕಿದ್ದೀರಿ; ಬಡಜನರಿಂದ ನೀವು ಕಿತ್ತುಕೊಂಡ ವಸ್ತುಗಳನ್ನು ಈಗಲೂ ನಿಮ್ಮ ಮನೆಗಳಲ್ಲಿ ಇಟ್ಟುಕೊಂಡಿದ್ದೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ತನ್ನ ಜನರ ಹಿರಿಯರನ್ನು, ಅಧಿಕಾರಿಗಳನ್ನೂ ನ್ಯಾಯವಿಚಾರಣೆಗೆ ತರುವನು. ಏಕೆಂದರೆ, “ನೀವು ದ್ರಾಕ್ಷಿಯ ತೋಟವನ್ನು ನುಂಗಿಬಿಟ್ಟಿದ್ದೀರಿ. ಬಡವರಿಂದ ಕೊಳ್ಳೆಹೊಡೆದದ್ದು ನಿಮ್ಮ ಮನೆಗಳಲ್ಲಿ ಇದೆ.
Kannada BSI Bible 2016
ಕರ್ತನು ತನ್ನ ಪ್ರಜೆಯಾದ ಪೂರ್ವಿಕರ ಸಂಗಡಲೂ ಅವರ ಅಧಿ ಪತಿಗಳ ಸಂಗಡಲೂ ನ್ಯಾಯತೀರಿಸಲು ಪ್ರವೇಶಿಸು ವನು; ನೀವು ದ್ರಾಕ್ಷೇ ತೋಟವನ್ನು ತಿಂದುಬಿಟ್ಟಿದ್ದೀರಿ; ಬಡವರಿಂದ ಕೊಳ್ಳೆ ಹೊಡೆದದ್ದು ನಿಮ್ಮ ಮನೆಗಳಲ್ಲಿ ಇದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ತನ್ನ ಜನರ ಹಿರಿಯರನ್ನೂ ಅಧಿಕಾರಿಗಳನ್ನೂ ನ್ಯಾಯವಿಚಾರಣೆಗೆ ತರುವನು; ನೀವು ದ್ರಾಕ್ಷೆಯ ತೋಟವನ್ನು ನುಂಗಿಬಿಟ್ಟಿದ್ದೀರಿ; ಬಡವರಿಂದ ಕೊಳ್ಳೆಹೊಡೆದದ್ದು ನಿಮ್ಮ ಮನೆಗಳಲ್ಲಿಯೇ ಇದೆ;
Kannada Bible (KNCL) BSI 2016
ಸ್ವಾಮಿ ಜನರ ನಾಯಕರನ್ನೂ ಅಧಿಪತಿಗಳನ್ನೂ ನ್ಯಾಯವಿಚಾರಣೆಗೆ ಗುರಿಪಡಿಸುವರು. “ನೀವು ದ್ರಾಕ್ಷಾತೋಟವನ್ನು ಕಬಳಿಸಿದ್ದೀರಿ. ಬಡವರಿಂದ ಕೊಳ್ಳೆಹೊಡೆದದ್ದನ್ನು ಮನೆಗಳಲ್ಲಿ ತುಂಬಿಸಿಕೊಂಡಿದ್ದೀರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ತಮ್ಮ ಪ್ರಜೆಗಳ ಹಿರಿಯರ ಸಂಗಡ, ಮತ್ತು ಅವರ ಅಧಿಪತಿಗಳ ಸಂಗಡ ನ್ಯಾಯತೀರಿಸಲು ಪ್ರವೇಶಿಸುವರು. ಏಕೆಂದರೆ, “ನೀವು ನನ್ನ ದ್ರಾಕ್ಷಿತೋಟವನ್ನು ತಿಂದುಬಿಟ್ಟಿದ್ದೀರಿ. ಬಡವರಿಂದ ಕೊಳ್ಳೆ ಹೊಡೆದದ್ದು ನಿಮ್ಮ ಮನೆಗಳಲ್ಲಿ ಇದೆ.