Isaiah 3:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಹೇಳುವುದೇನೆಂದರೆ; “ಚೀಯೋನಿನ ಸ್ತ್ರೀಯರು ವಯ್ಯಾರದಿಂದ ತಲೆಯಾಡಿಸುತ್ತಾ, ಕುಡಿನೋಟ ಬೀರುತ್ತಾ, ಕುಲುಕಿ ಹೆಜ್ಜೆಯಿಡುತ್ತಾ, ಕಾಲುಗೆಜ್ಜೆಯನ್ನು ಝಣಝಣಿಸುತ್ತಾ ನಡೆಯುತ್ತಾರೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಯೆಹೋವನು ಹೀಗನ್ನುತ್ತಾನೆ, ಚೀಯೋನಿನ ಹೆಂಗಸರು ಅಹಂಕಾರವುಳ್ಳವರಾಗಿ, ಕತ್ತು ತೂಗುತ್ತಾ, ಕಣ್ಣುಗಳನ್ನು ತಿರುಗಿಸುತ್ತಾ, ವಯ್ಯಾರವಾಗಿ ಹೆಜ್ಜೆ ಇಡುತ್ತಾ, ಕಾಲು ಗೆಜ್ಜೆ ಜಣಜಣಿಸುತ್ತಾ ನಡೆಯುವವರಾಗಿರುವುದರಿಂದ,
Kannada BSI Bible 2016
ಇದಲ್ಲದೆ ಕರ್ತನು ಇಂತೆನ್ನುತ್ತಾನೆ --ಚೀಯೋನ್ ಕುಮಾರ್ತೆಯರು ಅಹಂಕಾರಿಗಳಾಗಿದ್ದು ಕತ್ತು ತೂಗುತ್ತಾ ಕಣ್ಣುಗಳನ್ನು ತಿರುಗಿಸುತ್ತಾ ನಾಜೂಕಿ ನಿಂದ ಹೆಜ್ಜೆಇಡುತ್ತಾ ಕಾಲುಗೆಜ್ಜೆ ಜಣಜಣಿಸುತ್ತಾ ನಡೆ ಯುವವರಾಗಿರುವದರಿಂದ,
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಯೆಹೋವನು ಹೀಗನ್ನುತ್ತಾನೆ - ಚೀಯೋನಿನ ಹೆಂಗಸರು ವಯ್ಯಾರವುಳ್ಳವರಾಗಿ ಕತ್ತು ತೂಗುತ್ತಾ ಕಡೆಗಣ್ಣುಹಾಕುತ್ತಾ ಕುಲುಕಿ ಹೆಜ್ಜೆಯಿಡುತ್ತಾ ಕಾಲುಗೆಜ್ಜೆ ಜಣಜಣಿಸುತ್ತಾ ನಡೆಯುವವರಾಗಿರುವದರಿಂದ
Kannada Bible (KNCL) BSI 2016
ಸ್ವಾಮಿ ಇಂತೆನ್ನುತ್ತಾರೆ: ಸಿಯೋನಿನ ಮಹಿಳೆಯರ ಒನಪು ಒಯ್ಯಾರಗಳನ್ನು ನೋಡಿರಿ. ಅವರು ಕತ್ತುತೂಗುತ್ತಾ, ಕಡೆಗಣ್ಣು ಹಾಕುತ್ತಾ, ಕುಲುಕಿ ಹೆಜ್ಜೆಯಿಡುತ್ತಾ, ಕಾಲುಗೆಜ್ಜೆ ಜಣಜಣಿಸುತ್ತಾ ನಡೆಯುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಯೆಹೋವ ದೇವರು ಇಂತೆನ್ನುತ್ತಾರೆ: “ಚೀಯೋನ್ ಪುತ್ರಿಯರು ಅಹಂಕಾರಿಗಳಾಗಿದ್ದು, ಕತ್ತು ತೂಗುತ್ತಾ, ಕಣ್ಣುಗಳನ್ನು ತಿರುಗಿಸುತ್ತಾ, ನಾಜೂಕಿನಿಂದ ಹೆಜ್ಜೆ ಇಡುತ್ತಾ, ಕಾಲುಗೆಜ್ಜೆ ಜಣಜಣಿಸುತ್ತಾ ನಡೆಯುತ್ತಾರೆ;