Isaiah 3:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರಜೆಗಳು ಒಬ್ಬರಿಗೊಬ್ಬರು ವಿರೋಧಿಗಳಾಗುವರು; ಬಾಲಕರು ಹಿರಿಯರನ್ನು ಗೌರವಿಸರು. ಸಾಮಾನ್ಯರು ಗಣ್ಯವ್ಯಕ್ತಿಗಳನ್ನು ಸನ್ಮಾನಿಸರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರಜೆಗಳು ಪರಸ್ಪರ ವಿರೋಧಿಗಳಾಗಿ, ಒಬ್ಬರನೊಬ್ಬರು ಹಿಂಸಿಸುವರು, ಬಾಲಕರು ಹಿರಿಯರ ಮೇಲೆಯೂ, ನೀಚನು ಘನವಂತನ ಜೊತೆಯಲ್ಲಿ ಸೊಕ್ಕಿನಿಂದ ವರ್ತಿಸುವರು.
Kannada BSI Bible 2016
ಪ್ರತಿಯೊಬ್ಬನು ಇನ್ನೊಬ್ಬ ನಿಂದಲೂ ಪ್ರತಿಯೊಬ್ಬನು ನೆರೆಯವನಿಂದಲೂ ಜನರು ಹಿಂಸಿಸಲ್ಪಡುವರು: ಹುಡುಗನು ವೃದ್ಧನ ವಿರೋಧವಾಗಿಯೂ ನೀಚನು ಘನವಂತನ ವಿರೋಧ ವಾಗಿಯೂ ಸೊಕ್ಕಿನಿಂದ ವರ್ತಿಸುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರಜೆಗಳು ಪರಸ್ಪರ ವಿರೋಧಿಗಳಾಗಿ ಒಬ್ಬರನ್ನೊಬ್ಬರು ಹಿಂಸಿಸುವರು; ಹುಡುಗನು ಮುದುಕನ ಮೇಲೆಯೂ ನೀಚನು ಘನವಂತನ ಮೇಲೆಯೂ ಸೊಕ್ಕೇರಿ ನಡೆಯುವರು.
Kannada Bible (KNCL) BSI 2016
ಪ್ರಜೆಗಳೆಲ್ಲ ಪರಸ್ಪರ ವಿರೋಧಿಗಳಾಗಿ, ಒಬ್ಬರನ್ನೊಬ್ಬರು ಹಿಂಸಿಸುವರು. ನೆರೆಹೊರೆಯವರನ್ನು ನಿಂದಿಸುವರು. ಕಿರಿಯರು ಹಿರಿಯರನ್ನು, ದುಷ್ಟರು ಶಿಷ್ಟರನ್ನು ಹೀಯಾಳಿಸುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮನುಷ್ಯನಿಗೆ ವಿರೋಧವಾಗಿ ಮನುಷ್ಯನು, ನೆರೆಯವನಿಗೆ ವಿರೋಧವಾಗಿ ನೆರೆಯವನು ಹಿಂಸಿಸುವನು. ಹುಡುಗನು ವೃದ್ಧನ ವಿರೋಧವಾಗಿಯೂ, ನೀಚನು ಘನವಂತನ ವಿರೋಧವಾಗಿಯೂ ಸೊಕ್ಕಿನಿಂದ ವರ್ತಿಸುವರು.