Isaiah 3:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಸಮಯದಲ್ಲಿ ಒಬ್ಬನು ತನ್ನ ಸ್ವಂತ ಕುಟುಂಬದ ಸಹೋದರನನ್ನು ಹಿಡಿದು, “ನಿನಗೆ ನಿಲುವಂಗಿಯದೆ. ಆದ್ದರಿಂದ ನೀನು ನಮಗೆ ನಾಯಕನಾಗು. ಈ ಅವಶೇಷಗಳೆಲ್ಲಾ ನಿನಗೆ ಅಧೀನವಾಗಿರಲಿ” ಎಂದು ಹೇಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದಿನದಲ್ಲಿ ಒಬ್ಬನು ತನ್ನ ಸಹೋದರನನ್ನು ತಂದೆಯ ಮನೆಯಲ್ಲಿ ಹಿಡಿದು, ‘ನಿನಗೆ ನಿಲುವಂಗಿ ಇದೆ. ನೀನು ನಮಗೆ ಒಡೆಯನಾಗಬೇಕು. ಹಾಳಾದ ಈ ಪಟ್ಟಣವು ನಿನ್ನ ಕೈಕೆಳಗಿರಲಿ ತಂದೆಯ ಮನೆಯೊಳಗೆ ಅಣ್ಣನನ್ನು ಬಲವಂತ ಮಾಡಲು ಅಣ್ಣನು ದೇಶದ ನಿರರ್ಥಕ ವ್ರಣವೈದ್ಯನಾಗುವುದಕ್ಕೆ ನನಗೆ ಇಷ್ಟವಿಲ್ಲ’ ಎಂದು ನಿರಾಕರಿಸುವನು.
Kannada BSI Bible 2016
ಒಬ್ಬನು ತನ್ನ ಸಹೋದರನನ್ನು ತಂದೆಯ ಮನೆಯಲ್ಲಿ ಹಿಡಿ ದು -- ನಿನಗೆ ವಸ್ತ್ರವಿದೆ, ನಮ್ಮನ್ನು ಆಳುವವನಾಗು ಮತ್ತು ಈ ಹಾಳಾದ ಪಟ್ಟಣವು ನಿನ್ನ ಕೈಕೆಳಗಿರಲಿ ಎಂದು ಹೇಳಲು
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದಿನದಲ್ಲಿ ಒಬ್ಬನು - ಎಲಾ, ಅಣ್ಣ, ನಿನಗೆ ನಿಲುವಂಗಿ ಇದೆ. ನೀನು ನಮಗೆ ಒಡೆಯನಾಗಬೇಕು, ಹಾಳಾದ ಈ ಪಟ್ಟಣವು ನಿನ್ನ ಕೈಕೆಳಗಿರಲಿ ಎಂದು ತಂದೆಯ ಮನೆಯೊಳಗೆ ಅಣ್ಣನನ್ನು ಬಲವಂತ ಮಾಡಲು
Kannada Bible (KNCL) BSI 2016
ಕಾಲ ಬರುವುದು. ಆಗ ಒಬ್ಬನು ತನ್ನ ಸಹೋದರರಲ್ಲೊಬ್ಬನಿಗೆ: “ನಿನಗೆ ನಿಲುವಂಗಿಯಾದರೂ ಇದೆ. ನೀನೇ ನಮಗೆ ಒಡೆಯನಾಗು. ಹಾಳುಬಿದ್ದ ಈ ಊರಿಗೆ ನೀನೇ ಗೌಡನಾಗು,” ಎಂದು ಹುಟ್ಟುಮನೆಯಲ್ಲೇ ಒತ್ತಾಯಿಸುತ್ತಾ ಹೇಳುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಬ್ಬನು ತನ್ನ ಸಹೋದರನನ್ನು ತಂದೆಯ ಮನೆಯಲ್ಲಿ ಹಿಡಿದು ಹೀಗೆ ಹೇಳುವನು, “ನಿನಗೆ ವಸ್ತ್ರವಿದೆ, ನಮ್ಮನ್ನು ನೀನು ಆಳುವವನಾಗು ಮತ್ತು ಈ ಹಾಳಾದ ಪಟ್ಟಣವು ನಿನ್ನ ಕೈಕೆಳಗಿರಲಿ.”