Isaiah 3:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜೆರುಸಲೇಮ್ ಮುಗ್ಗರಿಸಿಬಿದ್ದು ಕೆಟ್ಟಕಾರ್ಯಗಳನ್ನು ಮಾಡಿದ್ದರಿಂದ ಹೀಗಾಗುವದು. ಯೆಹೂದವು ಪಾಪದಲ್ಲಿ ಬಿದ್ದು ದೇವರನ್ನು ಹಿಂಬಾಲಿಸುವುದನ್ನು ನಿಲ್ಲಿಸಿಯದೆ. ಅವರಾಡುವ ಮಾತುಗಳು, ಮಾಡುವ ಕ್ರಿಯೆಗಳು ಯೆಹೋವನಿಗೆ ವಿರುದ್ಧವಾಗಿವೆ. ಯೆಹೋವನ ಮಹಿಮಾಶಕ್ತಿಯಿಂದ ಕೂಡಿದ ಕಣ್ಣುಗಳು ಇವೆಲ್ಲವನ್ನು ನೋಡುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ಯೆರೂಸಲೇಮ್ ಹಾಳಾಯಿತು. ಯೆಹೂದವು ಬಿದ್ದುಹೋಯಿತು. ಅವರ ನಡೆನುಡಿಗಳು ಯೆಹೋವನಿಗೆ ವಿರುದ್ಧವಾಗಿ ಆತನ ಪ್ರಭಾವದ ದೃಷ್ಟಿಯನ್ನು ಕೆರಳಿಸುತ್ತದಲ್ಲವೇ?
Kannada BSI Bible 2016
ಯೆರೂಸಲೇಮು ಹಾಳಾಗಿದೆ, ಯೆಹೂ ದವು ಬಿದ್ದುಹೋಗಿದೆ, ಆದದರಿಂದ ಅವರ ನಡೆನುಡಿ ಗಳು ಕರ್ತನಿಗೆ ವಿರುದ್ಧವಾಗಿ ಆತನ ಪ್ರಭಾವದ ದೃಷ್ಟಿ ಯನ್ನು ಕೆರಳಿಸುತ್ತವಲ್ಲವೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆರೂಸಲೇಮು ಹಾಳಾಯಿತು, ಯೆಹೂದದವರು ಬಿದ್ದುಹೋದರು! ಅವರ ನಡೆನುಡಿಗಳು ಯೆಹೋವನಿಗೆ ವಿರುದ್ಧವಾಗಿ ಆತನ ಪ್ರಭಾವದ ದೃಷ್ಟಿಯನ್ನು ಪ್ರತಿಭಟಿಸುತ್ತವಲ್ಲವೆ.
Kannada Bible (KNCL) BSI 2016
ಜೆರುಸಲೇಮ್ ನಗರ ಹಾಳಾಯಿತು. ಜುದೇಯ ನಾಡು ಬಿದ್ದುಹೋಯಿತು. ಜನರ ನಡೆನುಡಿಗಳೆಲ್ಲ ಸ್ವಾಮಿಗೆ ವಿರುದ್ಧವಾದವು. ಸ್ವಾಮಿಯ ಮಹಿಮಾ ಸಾನ್ನಿಧ್ಯಕ್ಕೆ ಪ್ರತೀಕೂಲವಾದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಯೆರೂಸಲೇಮು ಹಾಳಾಗಿದೆ, ಯೆಹೂದವು ಬಿದ್ದುಹೋಗಿದೆ. ಅವರ ನಡೆನುಡಿಗಳು ಯೆಹೋವ ದೇವರಿಗೆ ವಿರುದ್ಧವಾಗಿ ದೇವರ ಪ್ರಭಾವದ ದೃಷ್ಟಿಯನ್ನು ಕೆರಳಿಸುತ್ತಾರೆ.