Isaiah 30:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಪ್ರವಾದಿಗಳಿಗೆ, “ನಾವು ಮಾಡಬೇಕಿರುವ ಕಾರ್ಯಗಳ ಬಗ್ಗೆ ದೈವೋಕ್ತಿ ನುಡಿಯಬೇಡಿ, ನಮಗೆ ಸತ್ಯವನ್ನು ತಿಳಿಸಬೇಡಿ. ನಮಗೊಪ್ಪುವ ಮನರಂಜನೆಯ ಮಾತುಗಳನ್ನಾಡಿ. ನಮಗೋಸ್ಕರ ಒಳ್ಳೆಯ ಸಂಗತಿಗಳನ್ನೇ ನಿಮ್ಮ ದರ್ಶನಗಳಲ್ಲಿ ನೋಡಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರು ದಿವ್ಯದರ್ಶಿಗಳಿಗೆ, “ನಿಮಗೆ ದರ್ಶನವಾಗದಿರಲಿ” ಎನ್ನುತ್ತಾರೆ, ಮತ್ತು ಪ್ರವಾದಿಗಳಿಗೆ, “ನಮಗಾಗಿ ನ್ಯಾಯವಾದವುಗಳನ್ನು ಪ್ರವಾದಿಸಬೇಡಿರಿ, ನಯವಾದವುಗಳನ್ನು ನಮಗೆ ನುಡಿಯಿರಿ, ಮೋಸವಾದವುಗಳನ್ನೇ ಪ್ರವಾದಿಸಿರಿ ಎನ್ನುತ್ತಾರೆ.
Kannada BSI Bible 2016
ಅವರು ನೋಡುವವರಿಗೆ--ನೋಡಬೇಡಿರೆಂದು, ದಿವ್ಯದರ್ಶಿಗಳಿಗೆ ನಿಮಗೆ ದರ್ಶನವಾಗದಿರಲೆನ್ನು ತ್ತಾರೆ. ಪ್ರವಾದಿಗಳಿಗೆ--ನಮಗೆ ನ್ಯಾಯವಾದವು ಗಳನ್ನು ಪ್ರವಾದಿಸಬೇಡಿರಿ ನಯವಾದವುಗಳನ್ನೇ ನುಡಿ ಯಿರಿ, ಮೋಸವಾದವುಗಳನ್ನೆ ಪ್ರವಾದಿಸಿರಿ ಅನ್ನು ತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರು ದಿವ್ಯದರ್ಶಿಗಳನ್ನು ಕುರಿತು - ನಿಮಗೆ ದರ್ಶನವಾಗದಿರಲಿ ಅನ್ನುತ್ತಾರೆ; ಮತ್ತು ಸಾಕ್ಷಾತ್ಕಾರಿಗಳಿಗೆ - ನಮಗಾಗಿ ನ್ಯಾಯವಾದವುಗಳನ್ನು ಸಾಕ್ಷಾತ್ಕರಿಸಬೇಡಿರಿ, ನಯವಾದವುಗಳನ್ನು ನಮಗೆ ನುಡಿಯಿರಿ, ಮಾಯವಾದವುಗಳನ್ನೇ ಸಾಕ್ಷಾತ್ಕರಿಸಿರಿ;
Kannada Bible (KNCL) BSI 2016
ಇವರು ದಿವ್ಯದರ್ಶಿಗಳನ್ನು ನೋಡಿ: “ನಿಮಗೆ ದರ್ಶನವಾಗದಿರಲಿ,” ಎನ್ನುತ್ತಾರೆ. ಪ್ರವಾದಿಗಳಿಗೆ: “ನಯವಾದುದ್ದನ್ನು ನಮಗೆ ನುಡಿಯಿರಿ. ಮಾಯವಾದವುಗಳನ್ನೇ ಪ್ರವಾದನೆ ಮಾಡಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ನೋಡುವವರಿಗೆ, “ನೋಡಬೇಡಿರಿ,” ಎಂದು ಪ್ರವಾದಿಗಳಿಗೆ, “ನಿಮಗೆ ದರ್ಶನವಾಗದಿರಲಿ,” ಎನ್ನುತ್ತಾರೆ. ಪ್ರವಾದಿಗಳಿಗೆ, ನಮಗೆ ನ್ಯಾಯವಾದವುಗಳನ್ನು ಪ್ರವಾದಿಸಬೇಡಿರಿ. ನಯವಾದವುಗಳನ್ನೇ ನುಡಿಯಿರಿ. ಮಾಯವಾದವುಗಳನ್ನೇ ಪ್ರವಾದಿಸಿರಿ ಎನ್ನುತ್ತಾರೆ.