Isaiah 30:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ತಪ್ಪಿತಸ್ಥರಾಗಿದ್ದೀರಿ. ನೀವು ಬಿರುಕು ಬಿಟ್ಟಿರುವ ಎತ್ತರದ ಗೋಡೆಯಂತಿದ್ದೀರಿ. ಆ ಗೋಡೆಯು ಇದ್ದಕ್ಕಿದ್ದಂತೆ ನೆಲಕ್ಕುರುಳಿ ಚೂರುಚೂರಾಗುವದು. ಒಳ್ಳೆಯ ಸಮಯವು ಬರುತ್ತಿದೆ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವುಗಳನ್ನೇ ಆಧಾರ ಮಾಡಿಕೊಂಡಿದ್ದರಿಂದ ಎತ್ತರವಾದ ಗೋಡೆಯ ಒಂದು ಭಾಗವು ಬಾಗುತ್ತಾ, ತಟ್ಟನೆ ಕ್ಷಣಮಾತ್ರದಲ್ಲಿ ಕಳಚಿಕೊಳ್ಳುವ ಹಾಗೆ, ನಿಮ್ಮ ಅಪರಾಧವೂ ನಿಮಗೆ ಅಪಾಯಕರವಾಗುವುದು.”
Kannada BSI Bible 2016
ನೀವು ಈ ಮಾತನ್ನು ತಿರಸ್ಕಾರ ಮಾಡಿ ಬಲತ್ಕಾರ, ಕುಯುಕ್ತಿಗಳನ್ನು ನಂಬಿ ಅವುಗಳನ್ನೇ ಆಧಾರಮಾಡಿಕೊಂಡದ್ದರಿಂದ ಎತ್ತರ ವಾದ ಗೋಡೆಯ ಒಂದು ಭಾಗವು ಉಬ್ಬಿಕೊಂಡು ತಟ್ಟನೆ ಕ್ಷಣಮಾತ್ರದಲ್ಲಿ ಕಳಚಿಬೀಳುವ ಹಾಗೆ ನಿಮ್ಮ ಅಪರಾಧವು ನಿಮಗೆ ಅಪಾಯಕರವಾಗಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎತ್ತರವಾದ ಗೋಡೆಯ ಒಂದು ಭಾಗವು ಬೊಗ್ಗುತ್ತಾ ತಟ್ಟನೆ ಕ್ಷಣ ಮಾತ್ರದಲ್ಲಿ ಕವಚಿಕೊಳ್ಳುವ ಹಾಗೆ ನಿಮ್ಮ ಅಪರಾಧವೂ ನಿಮಗೆ ಅಪಾಯಕರವಾಗುವದು.
Kannada Bible (KNCL) BSI 2016
ಇದ್ದಕ್ಕಿದ್ದಂತೆ ಆ ಗೋಡೆ ತಟ್ಟನೆ ಬಿದ್ದುಹೋಗುವುದು. ಅಂತೆಯೇ ನಿಮ್ಮ ಅಪರಾಧ ನಿಮಗೆ ಅಪಾಯಕರವಾಗಿರುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎತ್ತರವಾದ ಗೋಡೆಯ ಒಂದು ಭಾಗವು ಉಬ್ಬಿಕೊಂಡು ತಟ್ಟನೆ ಕ್ಷಣಮಾತ್ರದಲ್ಲಿ ಕಳಚಿ ಬೀಳುವ ಹಾಗೆ ನಿಮ್ಮ ಅಪರಾಧವು ನಿಮಗೆ ಅಪಾಯಕರವಾಗಿರುವುದು.