Isaiah 30:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಒಡೆಯನೂ ದೇವರೂ ಇಸ್ರೇಲಿನ ಪರಿಶುದ್ಧನೂ ಹೇಳುವುದೇನೆಂದರೆ, “ನೀವು ನನ್ನ ಕಡೆಗೆ ತಿರುಗಿಕೊಳ್ಳುವುದಾದರೆ ನೀವು ರಕ್ಷಿಸಲ್ಪಡುವಿರಿ. ನೀವು ತಾಳ್ಮೆಯಿಂದ ನನ್ನ ಮೇಲೆ ಭರವಸೆಯಿಟ್ಟರೆ, ನೀವು ಬಲವನ್ನು ಹೊಂದುವಿರಿ.” ಆದರೆ ಹಾಗೆ ಮಾಡಲು ನಿಮಗೆ ಇಷ್ಟವಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರ ಸದಮಲಸ್ವಾಮಿಯಾಗಿರುವ ಕರ್ತನಾದ ಯೆಹೋವನು, “ನೀವು ಪರಿವರ್ತನೆಗೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗುವುದು; ಶಾಂತರಾಗಿ ಭರವಸದಿಂದಿರುವುದೇ ನಿಮಗೆ ಬಲ ಎಂದು ಹೇಳಿದ್ದರೂ, ನೀವು ಒಪ್ಪಿಕೊಂಡಿಲ್ಲ.
Kannada BSI Bible 2016
ಇಸ್ರಾಯೇಲಿನ ಪರಿಶುದ್ಧ ಕರ್ತನಾದ ದೇವರು ಹೇಳುವದೇನೆಂದರೆ--ನೀವು ತಿರುಗಿಕೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗು ವದು. ಶಾಂತರಾಗಿ ಭರವಸದಿಂದಿರುವದೇ ನಿಮಗೆ ಬಲ ಎಂದು ಹೇಳಿದ್ದರೂ ನೀವು ಒಪ್ಪಿಕೊಂಡಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರ ಸದಮಲಸ್ವಾವಿುಯಾಗಿರುವ ಕರ್ತನಾದ ಯೆಹೋವನು - ನೀವು ತಿರುಗಿಕೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗುವದು; ಶಾಂತರಾಗಿ ಭರವಸದಿಂದಿರುವದೇ ನಿಮಗೆ ಬಲ ಎಂದು ಹೇಳಿದ್ದರೂ ನೀವು ಒಪ್ಪಿಕೊಂಡಿಲ್ಲ.
Kannada Bible (KNCL) BSI 2016
ಪರಮಪಾವನವಾಗಿರುವ ಇಸ್ರಯೇಲಿನ ಸರ್ವೇಶ್ವರ ಸ್ವಾಮಿಯಾದ ನಾನು ನಿಮಗೆ ಹೇಳುವುದೇನೆಂದರೆ: “ನೀವು ಪಶ್ಚಾತ್ತಾಪಪಟ್ಟು ನನಗೆ ಅಭಿಮುಖವಾಗಿ ನೆಮ್ಮದಿಯಿಂದಿದ್ದರೆ ಉದ್ಧಾರವಾಗುವಿರಿ. ಶಾಂತಿಸಮಾಧಾನ ಮತ್ತು ಭಕ್ತಿಭರವಸೆಯಲ್ಲೇ ಶಕ್ತಿಯನ್ನು ಪಡೆಯುವಿರಿ.” ಆದರೆ ನೀವು ಒಪ್ಪಿಕೊಂಡಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಇಸ್ರಾಯೇಲಿನ ಪರಿಶುದ್ಧನಾದ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, “ನೀವು ತಿರುಗಿಕೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗುವುದು. ಶಾಂತರಾಗಿ ಭರವಸದಿಂದಿರುವುದೇ ನಿಮಗೆ ಬಲ ಎಂದು ಹೇಳಿದ್ದರೂ, ನೀವು ಒಪ್ಪಿಕೊಂಡಿಲ್ಲ.