Isaiah 30:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಚೀಯೋನ್ ಪರ್ವತದಲ್ಲಿರುವ ಜೆರುಸಲೇಮಿನಲ್ಲಿ ಯೆಹೋವನ ಜನರು ವಾಸಿಸುವರು. ನೀವು ಇನ್ನು ಮೇಲೆ ಅಳುವದಿಲ್ಲ. ಯೆಹೋವನು ನಿಮ್ಮ ಅಳುವಿಕೆಯನ್ನು ನೋಡಿ ನಿಮ್ಮನ್ನು ಆದರಿಸುವನು. ಆತನು ನಿಮ್ಮ ಮೊರೆಯನ್ನು ಕೇಳಿ ನಿಮಗೆ ಸಹಾಯಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳುವುದೇ ಇಲ್ಲ; ನೀವು ಕೂಗಿ ದುಃಖಿಸಿದ ಶಬ್ದವನ್ನು ಆತನು ಕೇಳಿ, ನಿಮಗೆ ಕೃಪೆ ತೋರಿಸೇ ತೋರಿಸುವನು; ಕೇಳಿದ ಕೂಡಲೆ ನಿಮಗೆ ಸದುತ್ತರವನ್ನು ದಯಪಾಲಿಸುವನು.
Kannada BSI Bible 2016
ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳು ವದೇ ಇಲ್ಲ. ನೀವು ಕೂಗಿಕೊಂಡ ಶಬ್ದವನ್ನು ಆತನು ಕೇಳಿ ನಿಮಗೆ ಕೃಪೆ ತೋರಿಸೇ ತೋರಿಸುವನು. ಆತನು ಅದನ್ನು ಕೇಳಿದಾಗಲೇ ಸದುತ್ತರವನ್ನು ದಯಪಾಲಿಸು ವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆರೂಸಲೇವಿುನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳುವದೇ ಇಲ್ಲ; ನೀವು ಕೂಗಿಕೊಂಡ ಶಬ್ದವನ್ನು ಆತನು ಕೇಳಿ ನಿಮಗೆ ಕೃಪೆತೋರಿಸೇ ತೋರಿಸುವನು; ಕೇಳಿದ ಕೂಡಲೆ ನಿಮಗೆ ಸದುತ್ತರವನ್ನು ದಯಪಾಲಿಸುವನು.
Kannada Bible (KNCL) BSI 2016
ಜೆರುಸಲೇಮಿನಲ್ಲಿ ವಾಸಿಸುವ ಸಿಯೋನಿನ ಜನರೇ, ನೀವಿನ್ನು ಅಳಬೇಕಾಗಿಲ್ಲ. ನಿಮ್ಮ ಕೂಗನ್ನು ಕೇಳಿದ್ದೇ, ಸರ್ವೇಶ್ವರ ನಿಮಗೆ ಕೃಪೆತೋರಿಸುವರು. ನಿಮ್ಮ ಸ್ವರವನ್ನು ಕೇಳಿದಾಕ್ಷಣ ಸದುತ್ತರವನ್ನು ದಯಪಾಲಿಸುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ, ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳಬೇಕಾಗಿಲ್ಲ. ನೀವು ಕೂಗಿ ದುಃಖಿಸಿದ ಶಬ್ದವನ್ನು ದೇವರು ಕೇಳಿ ನಿಮಗೆ ಕೃಪೆ ತೋರಿಸೇ ತೋರಿಸುವರು. ದೇವರು ನಿಮ್ಮ ಸ್ವರವನ್ನು ಕೇಳಿದ ಕೂಡಲೇ ಸದುತ್ತರವನ್ನು ದಯಪಾಲಿಸುವರು.