Isaiah 30:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹಿಂದಿನ ದಿವಸಗಳಲ್ಲಿ ನನ್ನ ಒಡೆಯನು ನಿಮಗೆ ದುಃಖವನ್ನೂ ಬೇನೆಯನ್ನೂ ಕೊಟ್ಟನು. ಅದು ನಿಮಗೆ ದಿನನಿತ್ಯ ತಿನ್ನುವಂಥ ರೊಟ್ಟಿಯಂತೆಯೂ ನೀರಿನಂತೆಯೂ ಇತ್ತು. ಆದರೆ ನಿಮ್ಮ ಬೋಧಕನಾದ ದೇವರು ನಿಮ್ಮಿಂದ ಎಂದಿಗೂ ಅಡಗಿಕೊಂಡಿರಲಾರನು. ನಿಮ್ಮ ಬೋಧಕನನ್ನು ನೀವು ಕಣ್ಣಾರೆ ಕಾಣುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನು ಕಷ್ಟವನ್ನು, ಶ್ರಮೆಯನ್ನು ನಿಮಗೆ ಅನ್ನಪಾನಗಳನ್ನಾಗಿ ಕೊಟ್ಟರೂ, ನಿಮ್ಮ ಬೋಧಕನು ಇನ್ನು ಮರೆಯಾಗಿರನು, ನಿಮ್ಮ ಬೋಧಕನನ್ನು ಕಣ್ಣಾರೆ ಕಾಣುವಿರಿ.
Kannada BSI Bible 2016
ಕರ್ತನು ನಿಮಗೆ ಕಷ್ಟವನ್ನು, ಶ್ರಮೆಯನ್ನು, ಅನ್ನಪಾನಗಳನ್ನಾಗಿ ಕೊಟ್ಟರೂ ಇನ್ನೂ ನಿಮ್ಮ ಬೋಧಕರು ತಮ್ಮನ್ನು ಮರೆಮಾಡಿಕೊಳ್ಳುವದಿಲ್ಲ. ಆದರೆ ನಿಮ್ಮ ಕಣ್ಣುಗಳು ನಿಮ್ಮ ಬೋಧಕನನ್ನು ನೋಡು ತ್ತಿರುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನು ಕಷ್ಟವನ್ನೂ ಶ್ರಮವನ್ನೂ ನಿಮಗೆ ಅನ್ನಪಾನಗಳನ್ನಾಗಿ ಕೊಟ್ಟರೂ ನಿಮ್ಮ ಬೋಧಕನು ಇನ್ನು ಮರೆಯಾಗಿರನು, ನಿಮ್ಮ ಬೋಧಕನನ್ನು ಕಣ್ಣಾರೆ ಕಾಣುವಿರಿ;
Kannada Bible (KNCL) BSI 2016
ಅವರು ನಿಮಗೆ ಕಷ್ಟಸಂಕಟವನ್ನು ಅನ್ನಪಾನವಾಗಿ ಕೊಟ್ಟರೂ ನಿಮ್ಮ ಬೋಧಕರು ಇನ್ನು ನಿಮಗೆ ಮರೆಯಾಗಿ ಇರುವುದಿಲ್ಲ. ನೀವು ಅವರನ್ನು ಕಣ್ಣಾರೆ ಕಾಣುವಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕರ್ತದೇವರು ನಿಮಗೆ ಕಷ್ಟವನ್ನು, ಶ್ರಮೆಯನ್ನು, ಅನ್ನಪಾನಗಳನ್ನಾಗಿ ಕೊಟ್ಟರೂ, ಇನ್ನೂ ನಿಮ್ಮ ಬೋಧಕರು ನಮಗೆ ಮರೆಯಾಗಿ ಇರುವುದಿಲ್ಲ. ಆದರೆ ನಿನ್ನ ಕಣ್ಣುಗಳು ನಿಮ್ಮ ಬೋಧಕರನ್ನು ನೋಡುತ್ತಿರುವುವು.