Isaiah 30:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮ್ಮಲ್ಲಿ ಬೆಳ್ಳಿಬಂಗಾರಗಳ ವಿಗ್ರಹಗಳಿವೆ. ಆ ಸುಳ್ಳುದೇವರುಗಳು ನಿಮ್ಮನ್ನು ಹೊಲೆಯನ್ನಾಗಿ ಮಾಡಿವೆ. ನೀವು ಅವುಗಳ ಸೇವೆಯನ್ನು ನಿಲ್ಲಿಸುವಿರಿ. ಅವು ಹೊಲಸು ವಸ್ತುಗಳೋ ಎಂಬಂತೆ ಅವುಗಳನ್ನೆತ್ತಿ ಬಿಸಾಡಿಬಿಡುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನೂ, ಎರಕದ ನಿಮ್ಮ ಬೊಂಬೆಗಳ ಬಂಗಾರದ ಹೊದಿಕೆಯನ್ನು ನೀವು ಹೊಲಸುಮಾಡಿ ಆ ವಿಗ್ರಹಗಳನ್ನು, “ತೊಲಗಿ ಹೋಗಿರಿ” ಎಂದು ಹೊಲೆಯಾದ ಬಟ್ಟೆಯಂತೆ ಬಿಸಾಡುವಿರಿ.
Kannada BSI Bible 2016
ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನು ಎರಕದ ನಿಮ್ಮ ವಿಗ್ರಹಗಳ ಬಂಗಾರದ ಹೊದಿಕೆಯನ್ನು ನೀವು ಹೊಲಸುಮಾಡಿ ಆ ವಿಗ್ರಹಕ್ಕೆ ತೊಲಗಿಹೋಗಿರಿ ಎಂದು ಹೊಲೆಯ ಬಟ್ಟೆಯಂತೆ ಬಿಸಾಡಿಬಿಡುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನೂ ಎರಕದ ನಿಮ್ಮ ಬೊಂಬೆಗಳ ಬಂಗಾರದ ಮುಲಾಮನ್ನೂ ನೀವು ಹೊಲಸು ಮಾಡಿ ಆ ವಿಗ್ರಹಗಳನ್ನು - ತೊಲಗಿ ಎಂದು ಹೊಲೆಯಂತೆ ಬಿಸಾಟುಬಿಡುವಿರಿ.
Kannada Bible (KNCL) BSI 2016
ಆಗ ಬೆಳ್ಳಿಯ ಕವಚಗಳಿಂದ ಕೂಡಿದ ನಿಮ್ಮ ವಿಗ್ರಹಗಳನ್ನೂ ಚಿನ್ನದಿಂದ ಲೇಪಿತವಾದ ನಿಮ್ಮ ಬೊಂಬೆಗಳನ್ನೂ ಬಿಸಾಡುವಿರಿ. ಅವುಗಳನ್ನು ಹೊಲೆಮಾಡಿ ‘ತೊಲಗಿ’ ಎಂದು ಹೇಳುತ್ತಾ ಎಸೆದುಬಿಡುವಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನೂ, ಎರಕದ ನಿಮ್ಮ ವಿಗ್ರಹಗಳ ಬಂಗಾರದ ಹೊದಿಕೆಯನ್ನೂ ನೀವು ಹೊಲಸ್ಸಾಗಿ ಭಾವಿಸಿ, ಆ ವಿಗ್ರಹಕ್ಕೆ, “ತೊಲಗಿಹೋಗು,” ಎಂದು ಹೇಳಿ, ಅದನ್ನು ಹೊಲೆಯ ಬಟ್ಟೆಯಂತೆ ಬಿಸಾಡಿ ಬಿಡುವಿರಿ.