Isaiah 30:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರತಿಯೊಂದು ಬೆಟ್ಟದಲ್ಲಿಯೂ ಪರ್ವತದಲ್ಲಿಯೂ ಹರಿಯುವ ನೀರಿನ ತೊರೆಗಳಿರುವವು. ಇವೆಲ್ಲಾ ಅನೇಕ ಜನರು ಕೊಲ್ಲಲ್ಪಟ್ಟ ನಂತರವೂ ಬುರುಜುಗಳು ಕೆಡವಲ್ಪಟ್ಟ ನಂತರವೂ ಸಂಭವಿಸುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗೋಪುರಗಳು ಬಿದ್ದು ಹೋಗುವ ಮಹಾಸಂಹಾರದ ದಿನದಲ್ಲಿ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ, ಎತ್ತರವಾದ ಗುಡ್ಡದಲ್ಲಿಯೂ ತೊರೆಗಳು, ನೀರಿನ ಕಾಲುವೆಗಳು ಹರಿಯುತ್ತಿರುವವು.
Kannada BSI Bible 2016
ಮಹಾಸಂಹಾರದ ದಿವಸ ದಲ್ಲಿ ಗೋಪುರಗಳು ಬೀಳುವಾಗ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ ಪ್ರತಿಯೊಂದು ಎತ್ತರವಾದ ಗುಡ್ಡದಲ್ಲಿಯೂ ತೊರೆಗಳೂ ನೀರಿನ ಕಾಲುವೆಗಳೂ ಹರಿಯುತ್ತಿರುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬುರುಜುಗಳು ಬಿದ್ದುಹೋಗುವ ಮಹಾಸಂಹಾರದ ದಿನದಲ್ಲಿ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ ಎತ್ತರವಾದ ಗುಡ್ಡದಲ್ಲಿಯೂ ತೊರೆಗಳೂ ನೀರಿನ ಕಾಲುವೆಗಳೂ ಹರಿಯುತ್ತಿರುವವು.
Kannada Bible (KNCL) BSI 2016
ಕೋಟೆಕೊತ್ತಲಗಳು ಬಿದ್ದುಹೋಗುವುವು. ಶತ್ರುಗಳ ಮಹಾಸಂಹಾರ ನಡೆಯುವ ಆ ದಿನದಂದು ಉನ್ನತ ಪರ್ವತಗಳಿಂದಲೂ ಎತ್ತರವಾದ ಗುಡ್ಡಗಳಿಂದಲೂ ತೊರೆಗಳೂ ನೀರಿನ ಕಾಲುವೆಗಳೂ ಹರಿಯುವುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಹಾ ಸಂಹಾರದ ದಿವಸದಲ್ಲಿ ಗೋಪುರಗಳು ಬೀಳುವಾಗ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ, ಪ್ರತಿಯೊಂದು ಎತ್ತರವಾದ ಗುಡ್ಡದಲ್ಲಿಯೂ ತೊರೆಗಳು ನೀರಿನ ಕಾಲುವೆಗಳೂ ಹರಿಯುತ್ತಿರುವುವು.