Isaiah 30:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಸಮಯದಲ್ಲಿ ಚಂದ್ರನ ಪ್ರಕಾಶವು ಸೂರ್ಯನಂತಿರುವದು. ಸೂರ್ಯನ ಪ್ರಕಾಶವು ಈಗ ಇರುವದಕ್ಕಿಂತ ಏಳರಷ್ಟು ಹೆಚ್ಚಾಗಿರುವದು. ಸೂರ್ಯನ ಒಂದು ದಿವಸದ ಬೆಳಕು ಒಂದು ವಾರದ ಬೆಳಕಿನಷ್ಟಿರುವದು. ಯೆಹೋವನು ತನ್ನ ಮುರಿದುಹೋದ ಜನರಿಗೆ ಆದ ಗಾಯದ ಪೆಟ್ಟುಗಳನ್ನು ಗುಣಪಡಿಸುವಾಗ ಇವೆಲ್ಲಾ ಸಂಭವಿಸುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ, ಯೆಹೋವನು ತನ್ನ ಜನರ ವ್ರಣವನ್ನು ಕಟ್ಟಿ, ಅವರ ಪೆಟ್ಟಿನ ಗಾಯವನ್ನು ಗುಣ ಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಪ್ರಕಾಶಮಾನವಾಗಿತ್ತು.
Kannada BSI Bible 2016
ಇಷ್ಟೇ ಅಲ್ಲದೆ ಕರ್ತನು ತನ್ನ ಜನರ ವ್ರಣವನ್ನು ಕಟ್ಟಿ ಅವರ ಪೆಟ್ಟಿನಗಾಯವನ್ನು ವಾಸಿಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಾಗಿ ಏಳು ದಿನಗಳ ಬೆಳಕಿ ನಂತಾಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಯೆಹೋವನು ತನ್ನ ಜನರ ವ್ರಣವನ್ನು ಕಟ್ಟಿ ಅವರ ಪೆಟ್ಟಿನ ಗಾಯವನ್ನು ಗುಣಮಾಡುವ ದಿವಸದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನಂತಿರುವದು, ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಿ ಏಳು ದಿನಗಳ ಬೆಳಕಿನಂತಾಗುವದು.
Kannada Bible (KNCL) BSI 2016
ಇದಲ್ಲದೆ ಚಂದ್ರನ ಬೆಳಕು ಸೂರ್ಯನ ಬೆಳಕಿನಂತಿರುವುದು. ಸೂರ್ಯನ ಬೆಳಕು ಏಳ್ಮಡಿ ಹೆಚ್ಚುವುದು. ಏಳು ದಿನಗಳ ಬೆಳಕು ಒಂದೇ ದಿನದ ಬೆಳಕಿನಂತಾಗುವುದು. ಅಂದು ಸರ್ವೇಶ್ವರ ತಮ್ಮ ಜನರ ಹುಣ್ಣುಗಳನ್ನು ಕಟ್ಟುವರು. ತಮ್ಮ ಪೆಟ್ಟಿನಿಂದ ಜನರಿಗಾದ ಗಾಯಗಳನ್ನು ಗುಣಪಡಿಸುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಷ್ಟೇ ಅಲ್ಲದೆ ಯೆಹೋವ ದೇವರು ತನ್ನ ಜನರ ವ್ರಣವನ್ನು ಕಟ್ಟಿ, ಅವರ ಪೆಟ್ಟಿನ ಗಾಯವನ್ನು ವಾಸಿಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಾಗಿ, ಏಳು ದಿನಗಳ ಬೆಳಕಿನಂತಾಗುವುದು.