Isaiah 30:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಗೋ, ಯೆಹೋವನ ನಾಮವು ಬಹುದೂರದಿಂದ ಬರುವದು. ಆತನ ಕೋಪವು ದಟ್ಟವಾದ ಹೊಗೆಯೊಂದಿಗೆ ಇರುವ ಬೆಂಕಿಯೋಪಾದಿಯಲ್ಲಿರುವದು. ಯೆಹೋವನ ಬಾಯಿ ಕೋಪದಿಂದಲೂ ನಾಲಿಗೆಯು ಸುಡುವ ಬೆಂಕಿಯಂತೆಯೂ ಇರುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ಯೆಹೋವನ ನಾಮವು ದೂರದಿಂದ ಬರುತ್ತದೆ; ಆತನ ಕೋಪವು ಬೆಂಕಿಯಂತೆ ಉರಿಯುತ್ತದೆ, ಅದರಿಂದೇಳುವ ಹೊಗೆಯು ದಟ್ಟವಾಗಿದೆ; ಆತನ ತುಟಿಗಳು ರೋಷದಿಂದ ತುಂಬಿವೆ, ಆತನ ನಾಲಿಗೆಯು ನುಂಗುವ ಅಗ್ನಿಯಂತಿದೆ.
Kannada BSI Bible 2016
ಇಗೋ, ಕರ್ತನ ನಾಮವು ದೂರದಿಂದ ಬರು ತ್ತದೆ. ಆತನ ಕೋಪವು ಉರಿಯುತ್ತದೆ. ಅದರಿಂದೇ ಳುವ ಉರಿಯು ದಟ್ಟವಾಗಿದೆ. ಆತನ ತುಟಿಗಳು ರೋಷದಿಂದ ತುಂಬಿವೆ. ನಾಲಿಗೆಯು ದಹಿಸುವ ಅಗ್ನಿ ಯಂತಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ಯೆಹೋವನಾಮಧೇಯನು ದೂರದಿಂದ ಬರುತ್ತಾನೆ; ಆತನ ಕೋಪವು ಉರಿಯುತ್ತಿದೆ, ಅದರಿಂದೇಳುವ ಹೊಗೆಯು ದಟ್ಟವಾಗಿದೆ; ಆತನ ತುಟಿಗಳು ರೋಷದಿಂದ ತುಂಬಿವೆ, ಆತನ ನಾಲಿಗೆಯು ನುಂಗುವ ಅಗ್ನಿ;
Kannada Bible (KNCL) BSI 2016
ಇಗೋ, ಸರ್ವೇಶ್ವರ ನಾಮಧೇಯನು ಬರುತಿಹನು ದೂರದಿಂದ; ಭುಗಿಲೇರುತಿದೆ ಆತನ ಕೋಪ ಏಳುತಿದೆ ದಟ್ಟವಾದ ಧೂಮ ಅದರಿಂದ. ದಹಿಸುವ ಅಗ್ನಿಯಂತಿದೆ ಆತನ ನಾಲಗೆ. ಭರಿತವಾಗಿದೆ ಆತನ ತುಟಿಗಳು ರೋಷದಿಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಗೋ, ಯೆಹೋವ ದೇವರ ನಾಮವು ದೂರದಿಂದ ಬರುತ್ತದೆ. ಆತನ ಕೋಪವು ಉರಿಯುತ್ತದೆ. ಅದರಿಂದೇಳುವ ಹೊಗೆಯು ದಟ್ಟವಾಗಿದೆ. ಆತನ ತುಟಿಗಳು ರೋಷದಿಂದ ತುಂಬಿವೆ. ಆತನ ನಾಲಿಗೆಯು ದಹಿಸುವ ಅಗ್ನಿಯಂತಿದೆ.